EBM News Kannada
Leading News Portal in Kannada

ಬೆಳಗಾವಿ | ಸುವರ್ಣಸೌಧದ ಮುಂದೆ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ | Belgaum

0



ಬೆಳಗಾವಿ : ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಸುವರ್ಣ ವಿಧಾನಸೌಧ ಮುಂಭಾಗ ಮಹಾತ್ಮ ಗಾಂಧಿಯ ಪುತ್ಥಳಿ ಅನಾವರಣಗೊಂಡಿತು.

ಗಾಂಧಿಜೀಯ 25 ಅಡಿಯ ಕಂಚಿನ ಪುತ್ಥಳಿಯನ್ನು ನಿರ್ಮಿಸಲಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಅನಾವರಣಗೊಳಿಸಿದರು. ಈ ಪ್ರತಿಮೆಗೆ ಸುಮಾರು 20 ಟನ್ ಕಂಚನ್ನು ಬಳಸಲಾಗಿದೆ.

ಈ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ‌. ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ‌. ವೇಣುಗೋಪಾಲ್, ರಣದೀಪ ಸಿಂಗ್ ಸುರ್ಜೇವಾಲ, ಸಚಿವರಾದ ಎಚ್.ಕೆ. ಪಾಟೀಲ, ಡಾ.ಜಿ.ಪರಮೇಶ್ವರ್‌, ಸತೀಶ್ ಜಾರಕಿಹೊಳಿ ಸೇರಿ ಮತ್ತಿತರರು ಇದ್ದರು.

Leave A Reply

Your email address will not be published.