ಬೆಂಗಳೂರು: ಇದೇ ತಿಂಗಳ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಗೆ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೇರವೇರಿಸಲು ಸಚಿವರುಗಳನ್ನು ನೇಮಕ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್-ತುಮಕೂರು, ಕಾನೂನು ಸಚಿವ ಎಚ್.ಕೆ.ಪಾಟೀಲ್-ಗದಗ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ-ಬೆಂಗಳೂರು ಗ್ರಾಮಾಂತರ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ- ರಾಮನಗರ, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್-ವಿಜಯಪುರ, ಇಂಧನ ಸಚಿವ ಕೆ.ಜೆ.ಜಾರ್ಜ್-ಚಿಕ್ಕಮಗಳೂರು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್-ದಕ್ಷಿಣ ಕನ್ನಡ.
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ-ಮೈಸೂರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ-ಬೆಳಗಾವಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ-ಕಲಬುರ್ಗಿ, ಜವಳಿ ಸಚಿವ ಶಿವಾನಂದ ಪಾಟೀಲ್-ಹಾವೇರಿ, ವಸತಿ ಸಚಿವ ಝಮೀರ್ ಅಹ್ಮದ್-ವಿಜಯನಗರ, ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ-ಯಾದಗಿರಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ-ಬೀದರ್, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ-ಮಂಡ್ಯ.
ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ-ದಾವಣಗೆರೆ, ಕಾರ್ಮಿಕ ಸಚಿವ ಸಂತೋಷ್ ಲಾಡ್-ಧಾರವಾಡ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್-ರಾಯಚೂರು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ-ಬಾಗಲಕೋಟೆ, ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್-ಚಾಮರಾಜನಗರ, ಕನ್ನಡ ಮತ್ತು ಸಂಸ್ಖತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ-ಕೊಪ್ಪಳ.
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್-ಚಿತ್ರದುರ್ಗ, ಕಂದಾಯ ಸಚಿವ ಕೃಷ್ಣಭೈರೇಗೌಡ-ಉಡುಪಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ-ಹಾಸನ, ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್-ಕೋಲಾರ, ಪೌರಾಡಳಿತ ಸಚಿವ ರಹೀಂ ಖಾನ್-ಬಳ್ಳಾರಿ, ಮೀನುಗಾರಿಕಾ ಸಚಿವ ಮಂಕಾಳ ವೈದ್ಯ-ಉತ್ತರ ಕನ್ನಡ.
ಶಿಕ್ಷಣ ಸಚಿವ ಮಧು ಬಂಗಾರಪ್ಪ-ಶಿವಮೊಗ್ಗ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್-ಚಿಕ್ಕಬಳ್ಳಾಪುರ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು-ಕೊಡಗು ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಲು ಆದೇಶದಲ್ಲಿ ಸೂಚಿಸಲಾಗಿದೆ.