EBM News Kannada
Leading News Portal in Kannada

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ : ಬೆಳಗಾವಿಯ ತಾಯಿ-ಮಗಳು ಮೃತ್ಯು

0



ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50), ಮೇಘಾ ಹತ್ತರವಾಠ ಎಂದು ಗುರುತಿಸಲಾಗಿದೆ. ಮೃತ ಜ್ಯೋತಿ ಸಹೋದರ ಗುರುರಾಜ್ ಹುದ್ದಾರ ಈ ಕುರಿತು ಮಾಹಿತಿ ನೀಡಿದ್ದಾರೆ.

ಮಹಾಕುಂಭ ಮೇಳದಲ್ಲಿ ಕಾಲ್ತುಳಿತದಲ್ಲಿ ಗಾಯಗೊಂಡ ಬಳಿಕ ಅವರನ್ನು ಇಂದು‌‌(ಬುಧವಾರ) ಬೆಳಗ್ಗೆ ಪ್ರಯಾಗ್​ರಾಜ್​ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ – ಮಗಳು ಮೃತಪಟ್ಟಿದ್ದಾರೆ ತಿಳಿದು ಬಂದಿದೆ.

Leave A Reply

Your email address will not be published.