ಬೆಂಗಳೂರು : ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಹಾಗೂ ಮಾಹಿತಿ ಆಯುಕ್ತರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾಗಿ ನಿವೃತ್ತ ಐಪಿಎಸ್ ಅಧಿಕಾರಿ ಆಶಿತ್ ಮೋಹನ್ ಪ್ರಸಾದ್, ರಾಜ್ಯ ಮಾಹಿತಿ ಆಯುಕ್ತರಾಗಿ ರಮಣ್ ಕೆ., ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ್ ಜಿ.ಚನ್ನಲ್, ರಾಜಶೇಖರ್ ಎಸ್., ಬದ್ರುದ್ದೀನ್ ಕೆ. ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ.ಮಮತಾ ಬಿ.ಆರ್. ಅವರನ್ನು ನೇಮಕ ಮಾಡಲಾಗಿದೆ.