EBM News Kannada
Leading News Portal in Kannada

ಯಾದಗಿರಿ | ಬೈಕಿಗೆ ಬಸ್ ಢಿಕ್ಕಿ: ಮೂವರು ಮಕ್ಕಳ ಸಹಿತ ಒಂದೇ ಕುಟುಂಬದ ಐವರು ಮೃತ್ಯು | Yadgir

0



ಯಾದಗಿರಿ: ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೂವರು ಪುಟಾಣಿ ಮಕ್ಕಳ ಸಹಿತ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ಸುರಪುರ ತಾಲೂಕಿನ ತಿಂಥಣಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.

ತಿಂಥಣಿ ಗ್ರಾಮದ ಕಮಾನ್ ಬಳಿ ಶ್ರೀರಂಗಪಟ್ಟಣ-ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಲಿಂಗಸೂಗೂರು ಕಡೆಯಿಂದ ಚಿಂಚೋಳಿ ಕಡೆಗೆ ಹೊರಟಿದ್ದ ಖಾಸಗಿ ಬಸ್ಸೊಂದು ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಲ್ಲಿ ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಬೈಕಿನಲ್ಲಿದ್ದ ಮೂವರು ಮಕ್ಕಳು ಮತ್ತು ಅವರ ತಂದೆ, ತಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತರ ಗುರುತು ಪತ್ತೆಯಾಗಿಲ್ಲ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

Leave A Reply

Your email address will not be published.