ಕೆಎಸ್ಆರ್ಟಿಸಿ ಬಸ್ಗಳ ನಡುವೆ ಭೀಕರ ಅಪಘಾತ: ನಾಲ್ವರ ದುರ್ಮರಣ, 10 ಗಾಯ
ಜೇವರ್ಗಿ: ಕೆಎಸ್ಆರ್ಟಿಸಿ ಬಸ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಜೇವರ್ಗಿಯಲ್ಲಿ ನಡೆದಿದೆ.
ಕಲಬುರಗಿಯ ಜೇವರ್ಗಿಯ ಪಟ್ಟಣದ ಬಳಿ ಕೆಎಸ್ಆರ್ಟಿಸಿ ಬಸ್ ಅನ್ನು ಓವರ್ ಟೇಕ್ ಮಾಡಲು ಹೋಗಿ ರಸ್ತೆ ಬದಿಯಿಂದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಸ್ಥಳದಲ್ಲೇ ಬಸ್ ಚಾಲಕ, ಮೂವರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದು 10 ಮಂದಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಜೇವರ್ಗಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.