ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆ; 5 ಗಂಟೆ ವೇಳೆಗೆ ಶೇ.51 ರಷ್ಟು ಮತದಾನ
ಬೆಂಗಳೂರು: ಬಿಜೆಪಿ ಅಭ್ಯರ್ಥಿ ಅಕಾಲಿಕ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 5 ಗಂಟೆಯವರೆಗೆ ಶೇ.51ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ನಗರದಲ್ಲಿ ಹಲವೆಡೆ ತುಂತುರು ಮಳೆ ಸುರಿಯುತ್ತಿದ್ದು, ಇದರ ನಡುವೆಯೂ ಮತದಾನ ಪ್ರಕ್ರಿಯೆ ಮುಂದುವರೆದಿದೆ.
ಈಗಾಗಲೇ ಸ್ಟಾರ್ ನಟರಾದ ಭಾರತಿ ವಿಷ್ಣು ವರ್ಧನ್, ನಟಿ ಮೇಘನ, ಹಾಸ್ಯ ನಟ ಉಮೇಶ್, ಸಾಹಿರಿ ಬರಗೂರು ರಾಮಚಂದ್ರಪ್ಪ, ನಟ ಮುಖ್ಯಮಂತ್ರಿ ಚಂದ್ರು, ಕಾಂಗ್ರೆಸ್ ಅಭ್ಯರ್ಥಿ ರೆಡ್ಡಿ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ಮತ್ತು ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ಸೇರಿದಂತೆ ಹಲವು ಮತ ಹಕ್ಕು ಚಲಾಯಿಸಿದ್ದಾರೆ.
ಜಯನಗರ ಕ್ಷೇತ್ರ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿ ಕಣವಾಗಿದೆ. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಬಿಜೆಪಿಯ ಶಾಸಕ ಬಿ.ಎನ್.ವಿಜಯಕುಮಾರ್ ಅವರು ಅಕಾಲಿಕ ನಿಧನದಿಂದಾಗಿ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಿಜೆಪಿ ಭದ್ರಕೋಟೆಯಾಗಿದ್ದ ಕ್ಷೇತ್ರದ ವಿಜಯಕುಮಾರ್ ನಿಧನದ ಬಳಿಕ ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ.
ಅನುಕಂಪದ ಅಲೆಯ ಲಾಭ ಪಡೆಯಲು ವಿಜಯಕುಮಾರ್ ಸಹೋದರ ಪ್ರಹ್ಲಾದ್ ಬಾಬು ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಕಾಂಗ್ರೆಸ್ ಪಕ್ಷ ಮಾಜಿ ಸಚಿವ ರಾಮಲಿಂಗಾರೆಡ್ಡಿಯವರ ಪುತ್ರಿ ಸೌಮ್ಯಾ ರೆಡ್ಡಿಯವರನ್ನು ಸ್ಪರ್ಧೆಗಿಳಿಸಿದೆ. ಹೀಗಾಗಿ ಈ ಬಾರಿಯ ಜಯನಗರ ಕ್ಷೇತ್ರದ ಚುನಾವಣೆ ಅತ್ಯಂತ ಕುತೂಹಲ ಕೆರಳಿಸಿದೆ.