ಭ್ರಷ್ಠಾಚಾರ ಆರೋಪ: ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ಧ ಎಸಿಬಿಗೆ ದೂರು
ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ವಿರುದ್ಧ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ದೂರು ದಾಖಲಾಗಿದೆ.
ಉದ್ಯೋಗ ಮತ್ತು ತರಬೇತಿ ಇಲಾಖೆಯ ಮಾಜಿ ನೌಕರರಾದ ಶಂಕರ್ ದೇವೇಗೌಡ ರತ್ನಪ್ರಭಾ ಭ್ರಷ್ಠಾಚಾರ ನಡೆಸುತ್ತಿದ್ದಾರೆಂದು ಎಸಿಬಿಗೆ ದೂರು ಸಲ್ಲಿಸಿದ್ದಾರೆ.ರತ್ನಪ್ರಭಾ ತಾವು ಅಧಿಕಾರ ದುರ್ಬಳಕೆ ಮಾಡಿಕೊಲ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಉದ್ಯೋಗ ಮತ್ತು ತರಬೇತಿ ಇಇಲಾಖೆಯ 62 ಜನರಿಗೆ ಹಿಂಬಡ್ತಿ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದರೂ ಸಹ ಕೋರ್ಟ್ ನ ಆದೇಶ ಜಾರಿಗೊಳಿಸದಂತೆ ಇಲಾಖೆಯ ಕಾರ್ಯದರ್ಶಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂದು ಶಂಕರ್ ದೇವೇಗೌಡ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಕಳೆದ ನವೆಂಬರ್ 30ರಂದು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದ ರತ್ನಪ್ರಭಾ ಅಧಿಕಾರಾವಧಿ ವಿಸ್ತರಣೆಗೆ ರಾಜ್ಯವು ಕೇಂದ್ರ ಸರ್ಕಾರಕ್ಕೆ ಇತ್ತೀಚಿಗಷ್ಟೇ ಶಿಫಾರಸು ಕಳಿಸಿತ್ತು.