ಆತಂಕ ಬೇಡ, ಶೀಘ್ರವೇ ಸಾಲಮನ್ನಾ: ಸಿಎಂ ಕುಮಾರಸ್ವಾಮಿ ಟ್ವೀಟ್
ಬೆಂಗಳೂರು: ಅತೀ ಶೀಘ್ರದಲ್ಲಿ ಸಾಲಮನ್ನಾ ಬಗ್ಗೆ ಘೋಷಿಸಲಾಗುವುದು. ಈ ಕುರಿತು ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಶುಕ್ರವಾರ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 24 ಗಂಟೆಯೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ಎಚ್ಡಿಕೆ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ಆದರೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಇಲ್ಲಿಯವರೆಗೂ ಸಾಲಮನ್ನಾ ಮುಂದೂಡುತ್ತಲೇ ಬಂದಿದ್ದು ಈಗ ಅಧಿಕೃತವಾಗಿ ಟ್ವೀಟ್ ಮಾಡುವ ಮೂಲಕ ರೈತರಿಗೆ ಭರವಸೆ ನೀಡಿದ್ದಾರೆ.
ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸಿಗಬೇಕು ಎನ್ನುವ ಉದ್ದೇಶ ನನ್ನದು. ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಅತಿ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ ಎಂದಿದ್ದಾರೆ.
ರೈತ ಬಾಂಧವರೇ, ಸಾಲ ಮನ್ನಾ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸಿಗಬೇಕು ಎನ್ನುವ ಉದ್ಧೇಶ ನನ್ನದು. ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಅತಿ ಶೀಘ್ರದಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇನೆ.#farmers #farmloanwaiver
— CM of Karnataka (@CMofKarnataka) June 15, 2018