EBM News Kannada
Leading News Portal in Kannada

ಬೆಂಗಳೂರು: ಕ್ರಿಕೆಟ್ ಆಡುವ ವಿಚಾರಕ್ಕೆ ಆದ ಜಗಳ ಕೊಲೆಯಲ್ಲಿ ಅಂತ್ಯ!

0

ಬೆಂಗಳೂರು: ಕ್ರಿಕೆಟ್ ಆಡುವ ವಿಚಾರಕ್ಕೆ ಜಗಳ ನಡೆದು ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾಲಕ್ಷ್ಮೀ ಲೇ ಔಟ್ ಠಾಣಾ ಸರಹದ್ದಿನ ಜೆ.ಸಿ.ನಗರದಲ್ಲಿ ಭಾನುವಾರ ಸಂಜೆ ನಡೆದಿದೆ.

ಮಹಾಲಕ್ಷ್ಮೀ ಲೇ ಔಟ್’ನ ಶ್ರೀರಾಮನಗರದ ಮಣಿಕಂಠ ಅಲಿಯಾಸ್ ದೊಟ್ಟಕಾಟು (22) ಮೃತ ಯುವಕನಾಗಿದ್ದಾನೆ.

ಮಣಿಕಂಠ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಈತ ಮಹಾಲಕ್ಷ್ಮೀ ಲೇ ಔಟ್ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಭಾನುವಾಹ ಮಧ್ಯಾಹ್ನ 4 ಗಂಟೆ ಸುಮಾರಿಗೆ ಸ್ನೇಹಿತರೊಂದಿಗೆ ಗೆಳೆಯರ ಬಳಗ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದ. ಕ್ರಿಕೆಟ್ ಪಂದ್ಯದ ವಿಚಾರವಾದಿ ಎದುರಾಳಿ ತಂಡದ ಯುವಕನೊಬ್ಬನ ಜೊತೆಗೆ ಜಗಳವಾಡಿ ಆತನ ಮೇಲೆ ಹಲ್ಲೆ ನಡೆಸಿದ್ದ.

ಮಣಿಕಂಠನಿಂದ ಹಲ್ಲೆಗೊಳಗಾಗಿದ್ದ ಯುವಕ ಹಲ್ಲೆಗೊಳಗಾದ ಬಗ್ಗೆ ತನ್ನ ಸ್ನೇಹಿತರಿಗೆ ಹೇಳಿದ್ದ. ಸಂಜೆ 6 ಗಂಟೆ ಸುಮಾರಿಗೆ ಜೆ.ಸಿ.ನಗರದಲ್ಲಿ ಮಣಿಕಂಠನ ಮೇಲೆ 4-5 ದುಷ್ಕರ್ಮಿಗಳ ತಂಡ ಎರಗಿ ಹಲ್ಲೆ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಮಣಿಕಂಠ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ಕೆಲಸವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಸ್ಥಳೀಯ ಸಿಸಿಟಿವಿಗಳನ್ನು ವಶಕ್ಕೆ ಪಡೆಗುಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.