EBM News Kannada
Leading News Portal in Kannada

ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಲು ನಾನ್ಯಾರು?: ನಟ ಪ್ರಕಾಶ್ ರಾಜ್

0

ತುಮಕೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಸ್ಥಾಪಿಸಿದ ಶಾಲೆಗಳನ್ನು ದತ್ತು ತೆಗೆದುಕೊಳ್ಳಲು ನಾನು ಯಾರು? ಶಾಲೆಗಳಿಗೆ ಉತ್ತಮ ಮೂಲಭೂತ ಸೌಕರ್ಯ ಒದಗಿಸಿ ಹೆಚ್ಚೆಚ್ಚು ಮಕ್ಕಳು ಸರ್ಕಾರಿ ಶಾಲೆಗಳಿಗೆ ದಾಖಲಾತಿ ಹೊಂದುವಂತೆ ನೋಡಿಕೊಳ್ಳಬೇಕು ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಅವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೊಯ್ಸಳಕಟ್ಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಾಲೆಯ ಮಕ್ಕಳು ಮತ್ತು ಶಿಕ್ಷಕರೊಂದಿಗೆ ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಶಾಲೆಗಳ ಗುಣಮಟ್ಟ ಉತ್ತಮಪಡಿಸಬೇಕೆಂದು ಶಾಲೆಯನ್ನು ದತ್ತು ತೆಗೆದುಕೊಳ್ಳಲು ನನಗೆ ಸಾಧ್ಯವಿಲ್ಲ. ಅದರ ಬದಲಿಗೆ ಅಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನನ್ನ ಕೈಲಾದ ಮಟ್ಟಿಗೆ ಕೊಡುಗೆ ನೀಡಬಹುದು ಎಂದು ಹೇಳಿದರು.

ಸರ್ಕಾರಿ ಶಾಲೆಗಳ ಸಶಕ್ತೀಕರಣಕ್ಕೆ ನಟ ಪ್ರಕಾಶ್ ರಾಜ್ ರಾಜ್ಯದಾದ್ಯಂತ ಪ್ರವಾಸ ಮಾಡಿ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವ ಪರಿಸ್ಥಿತಿಗಳ ಬಗ್ಗೆ ಅಧ್ಯಯನ ನಡೆಸಿ ಅಲ್ಲಿನ ಶಿಕ್ಷಕರು ಮತ್ತು ಕಾರ್ಯಕರ್ತರೊಂದಿಗೆ ಪ್ರಕಾಶ್ ರಾಜ್ ಫೌಂಡೇಶನ್ ಮೂಲಕ ಕೈಜೋಡಿಸುತ್ತಿದ್ದಾರೆ.

Leave A Reply

Your email address will not be published.