ಜುಲೈ 5ಕ್ಕೆ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ: ಸಿಎಂ ಕುಮಾರಸ್ವಾಮಿ
ಬೆಂಗಳೂರು: ಜುಲೈ.5ರಂದು 2018-19ನೇ ಸಾಲಿನ ರಾಜ್ಯ ಸರ್ಕಾರದ ನೂತನ ಮುಂಗಡಪತ್ರ ಮಂಡಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಹಮ್ಮಿಕೊಂಡಿದ್ದ ಕಲಾಕುಲದ ಅಭಿನಂದನೆ ಸಮಾರಂಭದಲ್ಲಿ ಗೌರವ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡುವುದೇ ನನ್ನ ಮೊದಲ ಬದ್ಧತೆ. ಅದಾದ ಬಳಿಕವೇ ಉಳಿದ ಯೋಜನೆಗಳು. ಈಗಾಗಲೇ ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಗಳನ್ನು ಆರಂಭಿಸಲಾಗಿದ್ದು, ಜುಲೈ.5ರಂದು ಬಜೆಟ್ ಮಂಡನೆ ಮಾಡುತ್ತೇನೆಂದು ಹೇಳಿದ್ದಾರೆ.
ಬಜೆಟ್ ಮಂಡನೆ ಬಳಿಕ ರೈತರು ನೆಮ್ಮದಿಯಿಂದ ಉಸಿರಾಡುವಂತಾಗುತ್ತದೆ. ಮೈಸೂರಿನಲ್ಲಿ ಸುಮಾರು 20 ಸಾವಿರ ಕೋಟಿ ವೆಚ್ಚದ ಪ್ರವಾಸೋದ್ಯಮ ಯೋಜನೆಯನ್ನು ರೂಪಿಸಲಾಗುತ್ತಿದೆ. ಶೀಘ್ರದಲ್ಲಿಯೇ ಇದಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.