Coronavirus in Karnataka: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 207ಕ್ಕೇರಿಕೆ; ಮತ್ತೆ 14 ಆಸ್ಪತ್ರೆಗಳು ಚಿಕಿತ್ಸೆಗೆ ಲಭ್ಯ
ಬೆಂಗಳೂರು (ಏ. 10): ಕೊರೋನಾ ಸೋಂಕಿತರ ಚಿಕಿತ್ಸೆಗೆಂದು ರಾಜ್ಯದಲ್ಲಿ ಸದ್ಯಕ್ಕಿರುವ 19 ಆಸ್ಪತ್ರೆಗಳ ಜೊತೆಗೆ 14 ಹೊಸ ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ. ಹೀಗಾಗಿ, ರಾಜ್ಯದಲ್ಲಿ ಒಟ್ಟು 33 ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಗೆ ಚಿಕಿತ್ಸೆ ಲಭ್ಯವಿದೆ.
ಲಾಕ್ಡೌನ್ ಘೋಷಿಸಿದ್ದರೂ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈಗಾಗಲೇ ಸೋಂಕಿತರ ಸಂಖ್ಯೆ 200ರ ಗಡಿ ದಾಟಿದ್ದು, ಇಂದು ಹೊಸದಾಗಿ 10 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದ ಆಸ್ಪತ್ರೆಗಳಿಗೆ ಕೊರೋನಾ ರೋಗಿಗಳಿಗೆ ವೆಂಟಿಲೇಟರ್ಗಳ ಸಮಸ್ಯೆಯೂ ಎದುರಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಕೊರೋನಾ ವೈರಸ್ ಚಿಕಿತ್ಸೆಗಾಗಿ 19 ಆಸ್ಪತ್ರೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುತಿಸಿತ್ತು.