EBM News Kannada
Leading News Portal in Kannada

ರಾಜ್ಯದಲ್ಲಿ ಇಂದು 11 ಕೊರೋನಾ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆ

0

ಬೆಂಗಳೂರು (ಏ. 12): ದೇಶಾದ್ಯಂತ ಲಾಕ್​ಡೌನ್​ ನಡುವೆಯೂ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕರ್ನಾಟಕದಲ್ಲಿ ಇಂದು 11 ಹೊಸ ಕೊರೋನಾ ವೈರಸ್​ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೂ 6 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆಯಿಂದ ಇಂದು ಮಧ್ಯಾಹ್ನದವರೆಗೆ ರಾಜ್ಯದಲ್ಲಿ 11 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ 1, ಬೆಂಗಳೂರಿನಲ್ಲಿ 3, ಕಲಬುರ್ಗಿಯಲ್ಲಿ 2, ವಿಜಯಪುರದಲ್ಲಿ 1, ಬೆಳಗಾವಿಯಲ್ಲಿ 4 ಜನರಿಗೆ ಕೊರೋನಾ ವೈರಸ್​ ಇರುವುದು ಖಚಿತವಾಗಿದೆ.
ಒಟ್ಟು 226 ಸೋಂಕಿತರಲ್ಲಿ ಈಗಾಗಲೇ 47 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ 173 ಜನರು ಕೊರೋನಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 6 ಜನರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತ ಜಿಲ್ಲೆಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಬೆಂಗಳೂರೊಂದರಲ್ಲೇ 76 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 2ನೇ ಸ್ಥಾನದಲ್ಲಿರುವ ಮೈಸೂರಿನಲ್ಲಿ 48 ಕೊರೋನಾ ಸೋಂಕಿತರಿದ್ದಾರೆ. ಮೂರನೇ ಸ್ಥಾನದಲ್ಲಿ ಬೆಳಗಾವಿಯಿದ್ದು, ಈ ಜಿಲ್ಲೆಯಲ್ಲಿ 14 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

Leave A Reply

Your email address will not be published.