EBM News Kannada
Leading News Portal in Kannada

ಪರಿಣಾಮಕಾರಿಯಾಗಿ ಲಾಕ್​ಡೌನ್ ಅನುಷ್ಠಾನಕ್ಕೆ ತಂದ ಸಿಎಂ ಬಿಎಸ್ ಯಡಿಯೂರಪ್ಪರನ್ನು ಹಾಡಿ ಹೊಗಳಿದ ಇಂಗ್ಲೆಂಡ್ ಸಚಿವ

0

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಾಗಿ ಲಾಕ್​ಡೌನ್​ ನಿಯಮಗಳನ್ನು ಅನುಷ್ಠಾನಕ್ಕೆ ತಂದಿರುವ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಲಾರ್ಡ್ ಚಾನ್ಸಲರ್ ಮತ್ತು ಯುನೈಟೆಡ್ ಕಿಂಗ್​ಡಮ್ (ಯುಕೆ) ರಾಜ್ಯ ನ್ಯಾಯಾಂಗ ಕಾರ್ಯದರ್ಶಿ ರಾಬರ್ಟ್ ಬುಕ್ಲ್ಯಾಂಡ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್​ನಲ್ಲಿ ವಾಸವಾಗಿರುವ ಕನ್ನಡಿಗರೊಂದಿಗೆ ಸಂವಾದದ ವೇಳೆ ಮಾತನಾಡಿದ ಬುಕ್ಲ್ಯಾಂಡ್​ ಅವರು, ಕೋವಿಡ್-19 ನಿಯಂತ್ರಣಕ್ಕೆ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಲಾಕ್​ಡೌನ್​ ಅನುಷ್ಠಾನಕ್ಕೆ ತಂದಿರುವ ಬಗ್ಗೆ ಮತ್ತು ಲಾಕ್​ಡೌನ್​ನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ವಸ್ತುಗಳ ಪೂರೈಕೆ ಹಾಗೂ ಆಹಾರ ನಿರ್ವಹಣೆ ಮಾಡಲಾಗುತ್ತಿದೆ. ಯಾರೊಬ್ಬರು ಕೂಡ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲು ಸರ್ಕಾರ ಸಾಧ್ಯವಾದಷ್ಟು ಮಟ್ಟಿಗೆ ಕಾರ್ಯಪ್ರವೃತ್ತವಾಗಿದೆ. ಜನರು ಸಹ ಪೂರಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಉತ್ತರ ನೀಡಿದ್ದಾಗಿ ತಿಳಿಸಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮುಂದಿನ ದಿನಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೇ, ಲಾಕ್​ಡೌನ್ ಸಮಯದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಂಡನ್​ನಲ್ಲಿ ನೆಲೆಸಿರುವ ಕೆಲ ಕನ್ನಡಿಗರೊಂದಿಗೆ ವಿಡಿಯೋ ಸಂವಾದ ಕೂಡ ನಡೆಸಿದ್ದಾರೆ.

ಸಂವಾದದ ವೇಳೆ ಸಿಎಂ ಬಿಎಸ್​ ಯಡಿಯೂರಪ್ಪ ಅವರು, ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೆ, ರಾಜ್ಯದಲ್ಲಿರುವ ಅವರ ಪೋಷಕರು, ಅಥವಾ ಸಹೋದರರ ಬಗ್ಗೆ ಯಾವುದೇ ಚಿಂತೆ ಮಾಡುವ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದ್ದಾರೆ. ಅವರ ಸುರಕ್ಷತೆಗೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.

ವೈದ್ಯಕೀಯ ಅಥವಾ ಇತರೆ ಅವಶ್ಯಕತೆ ಇದ್ದಲ್ಲಿ ಅವರು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದು ಸಿಎಂತಿಳಿಸಿದರು. ಹಾಗೂ ಶಿಕ್ಷಣ ಸಾಲ ಪಡೆದು ವಿದೇಶದಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಾಲ ಮರುಪಾವತಿ ಸಮಸ್ಯೆ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದು ಸಿಎಂ ಇದೇ ವೇಳೆ ಹೇಳಿದರು.

Leave A Reply

Your email address will not be published.