EBM News Kannada
Leading News Portal in Kannada

ಲೋಕಸಭೆಯಲ್ಲಿ ಕೇಂದ್ರದ ವಿರುದ್ಧ ವಿಪಕ್ಷಗಳಿಂದ ಅವಿಶ್ವಾಸ ಗೊತ್ತುವಳಿ ಮಂಡನೆ, ಮಾತನಾಡಲಿದ್ದಾರೆ ರಾಹುಲ್ ಗಾಂಧಿ – Kannada News | Manipur Issue: Debate on no confidence motion to begin today, Rahul Gandhi likely to lead Congress’s charge

0


No Confidence Motion: ಮಣಿಪುರ ಹಿಂಸಾಚಾರ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಮಾತನಾಡಲಿದ್ದಾರೆ.

ರಾಹುಲ್ ಗಾಂಧಿ

Image Credit source: Telegraph India

ಮಣಿಪುರ ಹಿಂಸಾಚಾರ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಮಾತನಾಡಲಿದ್ದಾರೆ. ಚರ್ಚೆಯ ಕೊನೆಯ ದಿನದಂದು ಪ್ರಧಾನಿ ಮೋದಿ ಇದಕ್ಕೆ ಉತ್ತರಿಸಬಹುದು ಎಂದು ಅಂದಾಜಿಸಲಾಗಿದೆ. ಮಣಿಪುರ ಹಿಂಸಾಚಾರದ ವಿಷಯದ ಬಗ್ಗೆ ಚರ್ಚೆಗಾಗಿ ಮತ್ತು ಪ್ರಧಾನಿ ಮೋದಿಯವರ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತ್ತು.

ರಾಹುಲ್ ಗಾಂಧಿ ಶಿಕ್ಷೆಗೆ ತಡೆ
ಶುಕ್ರವಾರ, ಮೋದಿ ಉಪನಾಮದ ಟೀಕೆಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಪಡೆದಿದ್ದಾರೆ. ಅದರ ನಂತರ ಅವರ ಸಂಸತ್ ಸದಸ್ಯತ್ವವನ್ನು ಪುನಃಸ್ಥಾಪಿಸಲಾಯಿತು.

ಕಾಂಗ್ರೆಸ್​ನಿಂದ ಸ್ವಾಗತ
ರಾಹುಲ್ ಗಾಂಧಿ ಸದಸ್ಯತ್ವ ಮರುಸ್ಥಾಪನೆಯನ್ನು ಕಾಂಗ್ರೆಸ್ ಸ್ವಾಗತಿಸಿದ್ದು, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ರಾಹುಲ್ ಗಾಂಧಿಯೇ ಮುಖ್ಯವಾಗಿ ಮಾತನಾಡಬೇಕೆಂದು ಹೇಳಿದೆ.
ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿರುವುದನ್ನು ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಇದು ಭಾರತದ ಜನರಿಗೆ ಅದರಲ್ಲೂ ವಿಶೇಷವಾಗಿ ವಯನಾಡು ಲೋಕಸಭಾ ಕ್ಷೇತ್ರದ ಜನರಿಗೆ ಸಮಾಧಾನ ತಂದಿದೆ ಎಂದು ಸೋಮವಾರ ಹೇಳಿದ್ದಾರೆ.

ಮತ್ತಷ್ಟು ಓದಿ: ನಾಳೆ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಬಗ್ಗೆ ಮಾತನಾಡಲಿದ್ದಾರೆ ರಾಹುಲ್ ಗಾಂಧಿ

ವಿರೋಧ ಪಕ್ಷದ ನಾಯಕರು ಘೋಷಣೆಗಳನ್ನು ಕೂಗಿದರು
ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಮರುಸ್ಥಾಪಿಸುವ ನಿರ್ಧಾರ ಸ್ವಾಗತಾರ್ಹ ಕ್ರಮ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ರಾಹುಲ್ ಗಾಂಧಿ ಸೋಮವಾರ ಸಂಸತ್ತಿಗೆ ಬಂದರು. ಸಂಸತ್ತಿನಲ್ಲಿ ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ಇಂಡಿಯಾ ಒಕ್ಕೂಟದ ನಾಯಕರು ರಾಹುಲ್ ಗಾಂಧಿ ಜಿಂದಾಬಾದ್ ಎಂದು ಘೋಷಣೆಗಳನ್ನು ಕೂಗಿದರು.

ತಾಜಾ ಸುದ್ದಿ

Leave A Reply

Your email address will not be published.