EBM News Kannada
Leading News Portal in Kannada

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ : ಮಗಳ ಚಿತೆಗೆ ಹಾರಿ ತಂದೆಯಿಂದ ಆತ್ಮಹತ್ಯೆ ಯತ್ನ – Kannada News | Gang rape victim’s father tries to kill himself attempts to jump onto daughter burning pyre

0


ರಾಜಸ್ಥಾನದ ಭಿಲ್ವಾರಾದಲ್ಲಿ 12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆಯಲ್ಲಿ ಆಕೆ ಮೃತಪಟ್ಟಿದ್ದಳು. ಆ ನೋವಿನಲ್ಲಿ ತಂದೆಯೂ ಕೂಡ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ವರದಿಯಾಗಿದೆ.

ರಾಜಸ್ಥಾನದ ಭಿಲ್ವಾರಾದಲ್ಲಿ 12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆಯಲ್ಲಿ ಆಕೆ ಮೃತಪಟ್ಟಿದ್ದಳು. ಆ ನೋವಿನಲ್ಲಿ ತಂದೆಯೂ ಕೂಡ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ವರದಿಯಾಗಿದೆ. ತನ್ನ ಮಗಳ ಮೇಲೆ ಅತ್ಯಾಚಾರವಾಗಿದೆ ಎನ್ನುವ ವಿಚಾರವನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ, ಮಾನಸಿಕವಾಗಿ ತುಂಬಾ ನೊಂದಿದ್ದರು, ನಿಲ್ಲಲು ಕೂಡ ಶಕ್ತಿ ಇರಲಿಲ್ಲ. ಉರಿಯುತ್ತಿದ್ದ ಮಗಳ ಚಿತೆಗೆ ತಾವೂ ಹಾರಿ ಅತ್ಮಹತ್ಯೆ ಮಾಡಿಕೊಳ್ಳಬೇಕು ಎನ್ನುವ ನಿರ್ಧಾರ ಮಾಡಿದ್ದರು.

ಉರಿಯುತ್ತಿರುವ ಚಿತೆಗೆ ಹಾರಿ ಬಾಲಕಿಯ ತಂದೆ ಗಾಯಗೊಂಡಿದ್ದಾರೆ. ನಂತರ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸರ್ಕಾರಿ ಮಹಾತ್ಮ ಗಾಂಧಿ ಆಸ್ಪತ್ರೆ ನಿರ್ದೇಶಕ ಡಾ.ಅರುಣ್ ಗೌರ್ ತಿಳಿಸಿದ್ದಾರೆ.

ಆಗಸ್ಟ್ 2 ರಂದು ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ನಂತರ ಆಕೆಯ ಸುಟ್ಟ ಅವಶೇಷಗಳು ಕಲ್ಲಿದ್ದಲು ಕುಲುಮೆಯಲ್ಲಿ ಪತ್ತೆಯಾಗಿವೆ.

ಮತ್ತಷ್ಟು ಓದಿ: ಹಣೆಗೆ ಬಂದೂಕಿಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಪೊಲೀಸ್ ಹಾಗೂ ಅವರ ಸಹೋದರನ ವಿರುದ್ಧ ಪ್ರಕರಣ ದಾಖಲು

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ನಾಪತ್ತೆಯಾಗಿರುವ ಅಪ್ರಾಪ್ತ ಬಾಲಕ ಮೇಕೆ ಮೇಯಿಸಲು ಗ್ರಾಮದ ಹೊಲಕ್ಕೆ ಹೋಗಿದ್ದಳು. ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಬಾಲಕಿಯನ್ನು ಹುಡುಕಲು ಪ್ರಾರಂಭಿಸಿದರು ಮತ್ತು ಕ್ರಮೇಣ ಕಲ್ಲಿದ್ದಲಿನ ಕುಲುಮೆಯ ಬಳಿ ಬಳೆ ಕಂಡಿತ್ತು.

ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಕಲ್ಲಿದ್ದಲು ಕುಲುಮೆಗೆ ಎಸೆದು ಸಜೀವ ದಹನ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು 12 ವರ್ಷದ ಬಾಲಕಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಇತರೆ ಭಾಗಗಳನ್ನು ಎಲ್ಲಾ ಸಾಕ್ಷ್ಯಗಳನ್ನು ಹಾಳುಮಾಡುವ ಪ್ರಯತ್ನದಲ್ಲಿ ಹತ್ತಿರದ ಕೊಳದಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿ

Leave A Reply

Your email address will not be published.