EBM News Kannada
Leading News Portal in Kannada

ಜಮ್ಮು-ಕಾಶ್ಮೀರ: ಭಾರತ ಒಳನುಸುಳಲು ಸಂಚು ರೂಪಿಸಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ, ಮುಂದುವರಿದ ಕಾರ್ಯಚರಣೆ – Kannada News | Jammu Kashmir: Killing of two terrorists who had plotted to infiltrate into India, continued operations National News

0


ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆ ಗುಂಡಿಕ್ಕಿ ಕೊಂದಿದ್ದಾರೆ.

ಜಮ್ಮು-ಕಾಶ್ಮೀರ: ಭಾರತ ಒಳನುಸುಳಲು ಸಂಚು ರೂಪಿಸಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ, ಮುಂದುವರಿದ ಕಾರ್ಯಚರಣೆ

ಸಾಂದರ್ಭಿಕ ಚಿತ್ರ

ಶ್ರೀನಗರ, ಆ.7 : ಇಂದು (ಆ.7) ಮುಂಜಾನೆ ಜಮ್ಮು ಮತ್ತು ಕಾಶ್ಮೀರ(Jammu-Kashmir) ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆ ಗುಂಡಿಕ್ಕಿ ಕೊಂದಿದ್ದಾರೆ. ಭದ್ರತಾ ಪಡೆ ಸಿಬ್ಬಂದಿಗಳು ಈ ಪ್ರದೇಶದಲ್ಲಿ ಭಯೋತ್ಪಾದಕರ ಜತೆಗೆ ಗುಂಡಿನ ಚಕಮಕಿಯನ್ನು ನಡೆಸಿದ್ದು, ಈ ಸಮಯದಲ್ಲಿ ಇಬ್ಬರು ಭಯೋತ್ಪಾದಕರ ಸಾವನ್ನಪ್ಪಿದ್ದಾರೆ. ಆದರೆ ಅವರ ದೇಹಗಳು ಇನ್ನೂ ಪತ್ತೆಯಾಗಿಲ್ಲ, ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಗಡಿ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ.

ಭಾನುವಾರದಂದು(ಆ.6)ಭದ್ರತಾ ಪಡೆ ಮತ್ತು ಕುಪ್ವಾರ ಪೊಲೀಸರ ಜಂಟಿ ಕಾರ್ಯಾಚರಣೆ ಮೂಲಕ ಜಮ್ಮು ಮತ್ತು ಕಾಶ್ಮೀರದ ತಂಗ್‌ಧರ್ ಸೆಕ್ಟರ್‌ ಮೂಲಕ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ ಒಬ್ಬ ಭಯೋತ್ಪಾದಕನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆ ವೇಳೆ ಹತ್ಯೆಯಾದ ಭಯೋತ್ಪಾದಕನಿಂದ ದೋಷಾರೋಪಣೆಯ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೀಗ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:14 am, Mon, 7 August 23

ತಾಜಾ ಸುದ್ದಿ

Leave A Reply

Your email address will not be published.