ಭೋಪಾಲ್: ಭಾರತದ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ವೇಳೆ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಮಧ್ಯಪ್ರದೇಶದ ಆರೋಗ್ಯ ಸಚಿವರು ಹಾಗೂ ವಿಧಾನಸಭಾ ಸ್ಪೀಕರ್ ಇಬ್ಬರೂ ವೇದಿಕೆಯ ಮೇಲೆ ಕುಸಿದು ಬಿದ್ದಿರುವ ಘಟನೆ ನಡೆದಿದೆ..
ರೈಸನ್ ನಲ್ಲಿ ಆರೋಗ್ಯ ಸಚಿವ ಡಾ.ಪ್ರಭುರಾಮ್ ಚೌಧರಿ ಅವರು ಪಥಸಂಚಲನ ಸಂದರ್ಭದಲ್ಲಿ ಗೌರವ ವಂದನೆ ಸ್ವೀಕರಿಸಲು ವೇದಿಕೆಯಲ್ಲಿದ್ದಾಗ ಕುಸಿದುಬಿದ್ದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳು ತಕ್ಷಣವೇ ಅವರ ರಕ್ಷಣೆಗೆ ಮುಂದಾಗಿದ್ದು, ರೈಸನ್ ನ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚೌಧರಿ ಅವರನ್ನು ವೈದ್ಯರು ಪರೀಕ್ಷಿಸಿದ್ದು, ಅವರು ಪ್ರಸ್ತುತ ನಿಗಾದಲ್ಲಿದ್ದಾರೆ ಎಂದು ಹೇಳಿದ್ದಾರೆ.
ಮೌಗಂಜ್ ನಲ್ಲಿ ಮಧ್ಯಪ್ರದೇಶ ವಿಧಾನಸಭೆಯ ಸ್ಪೀಕರ್ ಗಿರೀಶ್ ಗೌತಮ್ ಅವರು ಧ್ವಜಾರೋಹಣ ಮಾಡಿದರು ಆದರೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲು ಆರಂಭಿಸಿದಾಗ ಅವರ ಆರೋಗ್ಯವು ಇದ್ದಕ್ಕಿದ್ದಂತೆ ಹದಗೆಟ್ಟಿತು. ತಕ್ಷಣ ವೈದ್ಯರನ್ನು ಕರೆಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.