EBM News Kannada
Leading News Portal in Kannada

ಗಮನ ಸೆಳೆದ ಖಾಲಿ ಕುರ್ಚಿ: ಕೆಂಪುಕೋಟೆಯ ಕಾರ್ಯಕ್ರಮದಿಂದ ದೂರ ಉಳಿದು ಸಂದೇಶ ರವಾನಿಸಿದ ಮಲ್ಲಿಕಾರ್ಜುನ ಖರ್ಗೆ

0



ಹೊಸದಿಲ್ಲಿ: ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದ್ದು, ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮದಿಂದ ದೂರ ಉಳಿದು ಹಿಂದಿನ ಪ್ರಧಾನಿಗಳ ಕೊಡುಗೆಗಳನ್ನು ಎತ್ತಿ ಹಿಡಿಯುವ ಸಂದೇಶವನ್ನು ರವಾನಿಸಿದ್ದಾರೆ.

ಪ್ರಧಾನಿ ಮೋದಿ ಭಾಷಣ ಮಾಡಿದ ಐತಿಹಾಸಿಕ ಕೆಂಪು ಕೋಟೆಯ ಒಂದು ವಿಭಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಿನ ಕುರ್ಚಿ ಖಾಲಿಯಾಗಿತ್ತು. ಖರ್ಗೆ ಅವರ “ಆರೋಗ್ಯ ಸರಿಯಾಗಿರಲಿಲ್ಲ” ಎಂದು ಕಾಂಗ್ರೆಸ್, ಅವರ ಅನುಪಸ್ಥಿತಿಯನ್ನು ವಿವರಿಸಿದೆ.

ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ನೇತಾಜಿ ಸುಭಾಷ್ ಚಂದ್ರ ಬೋಸ್, ಮೌಲಾನಾ ಆಝಾದ್, ರಾಜೇಂದ್ರ ಪ್ರಸಾದ್, ಸರೋಜಿನಿ ನಾಯ್ಡು ಮತ್ತು ಬಿ.ಆರ್. ಅಂಬೇಡ್ಕರ್ ಅವರಂತಹ ಸ್ವಾತಂತ್ರ್ಯದ ಹೋರಾಟಗಾರರಿಗೆ ಖರ್ಗೆ ಅವರು ತಮ್ಮ ವೀಡಿಯೊ ಸಂದೇಶದಲ್ಲಿ ಗೌರವ ಸಲ್ಲಿಸಿದರು.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರ ಕಾಂಗ್ರೆಸ್ ಪ್ರಧಾನಿಗಳಾದ ಇಂದಿರಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ, ಪಿ.ವಿ. ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ಎತ್ತಿ ತೋರಿಸಿದರು. ಬಿಜೆಪಿ ನಾಯಕಅಟಲ್ ಬಿಹಾರಿ ವಾಜಪೇಯಿ ಅವರನ್ನೂ ಅವರು ಉಲ್ಲೇಖಿಸಿದ್ದಾರೆ.

“ಪ್ರತಿಯೊಬ್ಬ ಪ್ರಧಾನ ಮಂತ್ರಿಗಳು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಿದ್ದಾರೆ. ಇಂದು ಕೆಲವರು ಭಾರತವು ಕಳೆದ ಕೆಲವು ವರ್ಷಗಳಲ್ಲಿ ಮಾತ್ರ ಪ್ರಗತಿಯನ್ನು ಕಂಡಿದೆ ಎಂದು ಹೇಳಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ಅಧ್ಯಕ್ಷರು ಪಿಎಂ ಮೋದಿ ವಿರುದ್ಧ ಸ್ಪಷ್ಟವಾಗಿ ಉಲ್ಲೇಖಿಸಿದರು. .

Leave A Reply

Your email address will not be published.