EBM News Kannada
Leading News Portal in Kannada

ಮಧ್ಯಪ್ರದೇಶ, ಛತ್ತೀಸಗಢ: ಚುನಾವಣೆ ದಿನಾಂಕ ಘೋಷಣೆಗೆ ಮೊದಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

0



ಹೊಸದಿಲ್ಲಿ: ಈ ವರ್ಷ ನಡೆಯಲಿರುವ ಮಧ್ಯಪ್ರದೇಶ ಮತ್ತು ಛತ್ತೀಸಗಢ ವಿಧಾನಸಭಾ ಚುನಾವಣೆಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಘೋಷಿಸಿದೆ. ಚುನಾವಣಾ ಆಯೋಗ ಚುನಾವಣೆ ದಿನಾಂಕಗಳನ್ನು ಘೋಷಿಸುವ ಮುನ್ನವೇ ಪಕ್ಷ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿರುವುದು ಇದೇ ಮೊದಲು.

ಒಟ್ಟು ಛತ್ತೀಸಗಢದ ಒಟ್ಟು 90 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪಕ್ಷ ಬಿಡುಗಡೆಗೊಳಿಸಿದ್ದರೆ ಮಧ್ಯ ಪ್ರದೇಶದ ಒಟ್ಟು 230 ವಿಧಾನಸಭಾ ಕ್ಷೇತ್ರಗಳ ಪೈಕಿ 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಚುನಾವಣಾ ದಿನಾಂಕ ಘೋಷಣೆಗೆ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿರುವ ಹಿಂದೆ ಬಿಜೆಪಿಗೆ ತನ್ನದೇ ಆದ ಕಾರಣವಿದೆ ಎಂದು ಹೇಳಲಾಗಿದೆ. ಪಕ್ಷದಲ್ಲಿ ಅಸಮಾಧಾನವಿದ್ದರೆ ಅವುಗಳು ಬೇಗನೇ ತಿಳಿದು ಅವುಗಳನ್ನು ಪರಿಹರಿಸಬಹುದು ಎಂಬುದು ಬಿಜೆಪಿಯ ಆಶಯವಾಗಿದೆ ಎಂದು ವರದಿಯಾಗಿದೆ.

Leave A Reply

Your email address will not be published.