ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (Iಈಡಿ) ತಮಗೆ ಸಮನ್ಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಶನಿವಾರ ಜಾರ್ಖಂಡ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಈಡಿ ಸಮನ್ಸ್ ವಿರುದ್ಧ ಸೊರೆನ್ ಸಲ್ಲಿಸಿದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 18 ರಂದು ನಿರಾಕರಿಸಿತ್ತು.
ನ್ಯಾಯಮೂರ್ತಿ ಅನಿರುದ್ಧ ಬೋಸ್ ಹಾಗೂ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರ ಪೀಠವು ಈ ವಿಷಯದಲ್ಲಿ ಪರಿಹಾರಕ್ಕಾಗಿ ಜಾರ್ಖಂಡ್ ಹೈಕೋರ್ಟ್ ಅನ್ನು ಸಂಪರ್ಕಿಸಲು ಸೊರೇನ್ ಗೆ ಅನುಮತಿ ನೀಡಿತು�
“ಈಡಿ ತಮಗೆ ಸಮನ್ಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಸೊರೆನ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ”ಎಂದು ಸೊರೆನ್ ಪರ ವಕೀಲ ಪಿಯೂಷ್ ಚಿತ್ರೇಶ್ ಹೇಳಿದ್ದಾರೆ.
ಆಗಸ್ಟ್ 14 ರಂದು ರಾಂಚಿಯಲ್ಲಿರುವ ಫೆಡರಲ್ ಏಜೆನ್ಸಿಯ ಕಚೇರಿಯಲ್ಲಿ ಹಾಜರಾಗಿ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ತಮ್ಮ ಹೇಳಿಕೆಯನ್ನು ದಾಖಲಿಸಲು ಈಡಿ ಸೊರೇನ್ ಗೆ� ಸಮನ್ಸ್ ಕಳುಹಿಸಿತ್ತು.
ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ರಕ್ಷಣಾ ಭೂ ಹಗರಣ ಪ್ರಕರಣದಲ್ಲಿ ಸೋರೆನ್ ಈಡಿ ಸಮನ್ಸ್ ಅನ್ನು ಸಹ ತಪ್ಪಿಸಿದ್ದರು.
48 ವರ್ಷದ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕನನ್ನು ಕಳೆದ ವರ್ಷ ನವೆಂಬರ್ 17 ರಂದು ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಮತ್ತೊಂದು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಡಿ ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.