ವಿಜಯವಾಡ: ಕೌಶಲಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ ಎಂದು ಎಎನ್‌ಐ ವರದಿ ಮಾಡಿದೆ.�
ಅಕ್ಟೋಬರ್ 31 ರಂದು, ವೈದ್ಯಕೀಯ ಕಾರಣಗಳಿಗಾಗಿ ಹೈಕೋರ್ಟ್ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿತ್ತು.
ಬಹುಕೋಟಿ ಕೌಶಲಾಭಿವೃದ್ಧಿ ನಿಗಮದ ಹಗರಣದಲ್ಲಿ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿದ ಬಳಿಕ, ಕಳೆದ ಸೆಪ್ಟೆಂಬರ್ 10 ರಿಂದ ಅವರನ್ನು ರಾಜಾಜಿನಗರದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು.
ಈ ವರ್ಷದ ಮಾರ್ಚ್‌ನಲ್ಲಿ, ಹಿಂದಿನ ಟಿಡಿಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ₹ 3,300 ಕೋಟಿ ಮೊತ್ತದ ಹಗರಣದ ಕುರಿತು ಸಿಐಡಿ ತನಿಖೆಯನ್ನು ಪ್ರಾರಂಭಿಸಿತ್ತು.
2016 ರಲ್ಲಿ ನಾಯ್ಡು ಅವರು ಸಿಎಂ ಆಗಿದ್ದಾಗ ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಅವರ ಉದ್ಯೋಗಾವಕಾಶವನ್ನು ಹೆಚ್ಚಿಸಲು APSSDC ಅನ್ನು ಸ್ಥಾಪಿಸಲಾಗಿತ್ತು.