EBM News Kannada
Leading News Portal in Kannada

ಮಹುವಾ ಹಾಗೂ ಹೀರಾನಂದಾನಿಗೆ ಈಡಿ ಸಮನ್ಸ್ | ಗುರುವಾರ ವಿಚಾರಣೆಗೆ ಹಾಜರಾಗಲು ಆದೇಶ

0


ಹೊಸದಿಲ್ಲಿ : ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಹಾಗೂ ದುಬೈ ಮೂಲದ ಉದ್ಯಮಿ ದರ್ಶನ್ ಹೀರಾನಂದಾನಿ ಅವರಿಗೆ ಜಾರಿ ನಿರ್ದೇಶನಾಲಯವು ಬುಧವಾರ ಸಮನ್ಸ್ ಜಾರಿಗೊಳಿಸಿದ್ದು, ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಈಡಿ 49 ವರ್ಷ ವಯಸ್ಸಿನ ಮಹುಆ ಮೊಯಿತ್ರಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎರಡು ಸಲ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಮಹುಆ ಅವರು ಅಧಿಕೃತ ಕಾರ್ಯಬಾಹುಳ್ಯದ ಹಿನ್ನೆಲೆಯಲ್ಲಿ ತನಗೆ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲವೆಂದು ಹೇಳಿದ್ದು ಮತ್ತು ನೋಟಿಸನ್ನು ಮುಂದೂಡುವಂತೆ ಕೋರಿದ್ದರು.

ಫೆಮಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿಮುಂಬೈ ಮೂಲದ ರಿಯಲ್ ಎಸ್ಟೇಟ್ ಹಗರಣಕ್ಕೆ ಸಂಬಂಧಿಸಿ ಮುಂಬೈ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ದರ್ಶನ್ ಹೀರಾನಂದಾನಿ ಅವರಿಗೂ ಪ್ರತ್ಯೇಕವಾಗಿ ಜಾರಿ ನಿರ್ದೇಶಾಲಯ ಸಮನ್ಸ್ ಜಾರಿಗೊಳಿಸಿದೆ. ಇದಕ್ಕೂ ಮೊದಲು ಅವರ ತಂದೆ ನಿರಂಜನ್ ಹೀರಾನಂದಾನಿ ಅವರು ಮುಂಬೈಯಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದರು.

ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿ ಅನೀತಿಯುತ ನಡವಳಿಕೆಗಾಗಿ ಮೊಯಿತ್ರಾ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಪಡಿಸಲಾಗಿತ್ತು.

ಮಹುಆ ಮೊಯಿತ್ರಾ ಅವರು, ದರ್ಶನ್ ಹೀರಾನಂದಾನಿ ನೀಡುವ ನಗದು ಹಾಗೂ ಕೊಡುಗೆಗಳಿಗೆ ಪ್ರತಿಯಾಗಿ ಸದನದಲ್ಲಿ ಕೈಗಾರಿಕೋದ್ಯಮಿ ಗೌತಮ್ ಆದಾನಿ, ಪ್ರಧಾನಿ ನರೇಂದ್ರ ಮೋದಿ ಮತ್ತಿತರರ ಬಗ್ಗೆ ವಾಗ್ದಾಳಿಗಳನ್ನು ನಡೆಸಿದ್ದರು ಎಂದು ಬಿಜೆಪಿಯ ಲೋಕಸಭಾ ಸದಸ್ಯ ನಿಶಿಕಾಂತ್ ದುಬೆ ಆಪಾದಿಸಿದ್ದರು.

Leave A Reply

Your email address will not be published.