ಹೊಸದಿಲ್ಲಿ : ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡುವ ಪ್ರಸ್ತಾಪಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಿಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ.
2004ರ ಅಕ್ಟೋಬರ್ 12ರಂದು ಭಾಷೆಗಳಿಗೆ ಶಾಸ್ತ್ರೀಯ ಭಾಷೆ ಸ್ಥಾನವನ್ನು ನೀಡಲು ಭಾರತ ಸರ್ಕಾರವು ನಿರ್ಧರಿಸಿತ್ತು. ಅದರಂತೆ ತಮಿಳು ಭಾಷೆಯು ಪ್ರಥಮವಾಗಿ ಶಾಸ್ತ್ರೀಯ ಭಾಷೆ ಸ್ಥಾನಮಾನ ಪಡೆದಿತ್ತು. ಬಳಿಕ ಸಂಸ್ಕೃತ, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾ ಭಾಷೆಗಳೂ ಶಾಸ್ತ್ರೀಯ ಸ್ಥಾನಮಾನ ಪಡೆಯಿತು.