ಥಾಣೆ : ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಥಾಣೆ ಕ್ರೈಂ ಬ್ರ್ಯಾಂಚ್ ಪೋಲಿಸರು ಗುರುವಾರ ಬಂಧಿಸಿದ್ದಾರೆ.
ಉದಯ ಕೊತ್ವಾಲ್ ಮತ್ತು ತುಷಾರ ಆಪ್ಟೆ ಬಂಧಿತ ವ್ಯಕ್ತಿಗಳಾಗಿದ್ದು, ಸ್ವಚ್ಛತಾ ಕಾರ್ಮಿಕನಿಂದ ಲೈಂಗಿಕ ದೌಜ್ಯನ್ಯಕ್ಕೆ ಒಳಗಾಗಿದ್ದ ಇಬ್ಬರು ಅಪ್ರಾಪ್ತ ವಯಸ್ಕ ಬಾಲಕಿಯರು ಓದುತ್ತಿದ್ದ ಶಾಲೆಯ ಅಧ್ಯಕ್ಷ ಮತ್ತು ಕಾರ್ಯದರ್ಶಿ ಆಗಿದ್ದಾರೆ.
ಆರೋಪಿಗಳು ಕರ್ಜತ್‌ನಲ್ಲಿ ಪೋಲಿಸರ ಬಲೆಗೆ ಬಿದ್ದಿದ್ದಾರೆ. ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಬಾಂಬೆ ಉಚ್ಛ ನ್ಯಾಯಾಲಯವು ಬುಧವಾರ ತಿರಸ್ಕರಿಸಿತ್ತು.