ಅಮೆರಿಕ: ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರ ಗೆಲುವಿನ ಬಗ್ಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಬುಧವಾರ ಸಂತಸ ವ್ಯಕ್ತಪಡಿಸಿದ್ದು, ಟ್ರಂಪ್ ಮತ್ತು ನಾನು ಇಬ್ಬರೂ ರಿಪಬ್ಲಿಕನ್ ಪಕ್ಷಕ್ಕೆ ಸೇರಿದವರು, ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಭಾರತ-ಅಮೆರಿಕ ಸಂಬಂಧಗಳು ಸುಧಾರಿಸಲಿದೆ ಎಂದು ಹೇಳಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರ ಗೆಲುವಿನಲ್ಲಿ ಭಾರತೀಯ ಮೂಲದ ಅಮೆರಿಕನ್ನರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಮುಖ್ಯಸ್ಥ ಅಠವಾಳೆ ಹೇಳಿದ್ದಾರೆ. ಟ್ರಂಪ್ ರಿಪಬ್ಲಿಕನ್ ಪಕ್ಷದಿಂದ ಬಂದವರು ಮತ್ತು ನನ್ನ ಪಕ್ಷದ ಹೆಸರು ರಿಪಬ್ಲಿಕನ್ ಪಕ್ಷ. ಆದ್ದರಿಂದ ನಾನು ತುಂಬಾ ಸಂತೋಷವಾಗಿದ್ದೇನೆ. ಅವರು ಅತ್ಯಂತ ದೊಡ್ಡ ನಾಯಕರಾಗಿದ್ದು, ಭಾರತೀಯ ಮೂಲದ ಮತದಾರರ ಬೆಂಬಲದಿಂದ ಆಯ್ಕೆಯಾಗಿದ್ದಾರೆ ಎಂದು ಅಠಾವಳೆ ಹೇಳಿದ್ದಾರೆ.
2020ರ ನ.3ರಂದು ಅಮೆರಿಕಾದ ಅಧ್ಯಕ್ಷೀಯ ಚುನಾವಣಾ ಫಲಿತಾಂಶದ ಬಳಿಕ ಜನಸಮೂಹವು ದಾಂಧಲೆ ನಡೆಸಿತ್ತು. ಈ ವೇಳೆ ಡೊನಾಲ್ಡ್ ಟ್ರಂಪ್ ರಿಪಬ್ಲಿಕನ್ ಎಂದು ಕರೆಯುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಅಠಾವಳೆ ಟೀಕಿಸಿದ್ದರು. ಅಧಿಕಾರ ಪರಿವರ್ತನೆಗೆ ಮುನ್ನ ಟ್ರಂಪ್ ಮಾಡಿದ್ದು ಪ್ರಜಾಪ್ರಭುತ್ವಕ್ಕೆ ಹಾನಿಕಾರಕವಾಗಿದ್ದು, ಇದರಿಂದಾಗಿ ರಿಪಬ್ಲಿಕನ್ ಎಂದು ಕರೆಯುವ ಹಕ್ಕನ್ನು ಅವರು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದರು.