ತಿರುವನಂತಪುರಂ: ಟಿಎಂಸಿಯನ್ನು ಸೇರ್ಪಡೆಯಾಗಿರುವ ಪಕ್ಷೇತರ ಶಾಸಕ ಪಿ.ವಿ.ಅನ್ವರ್, ಸೋಮವಾರ ನಿಲಂಬುರ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅನ್ವರ್, “ವಿಧಾನಸಭಾ ಸ್ಪೀಕರ್ ಅವರಿಗೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.
ಮಲಪ್ಪುರಂನ ನಿಲಂಬುರ್ ವಿಧಾನಸಭಾ ಕ್ಷೇತ್ರದಿಂದ ಎಡಪಕ್ಷಗಳ ಬೆಂಬಲದೊಂದಿಗೆ ಅನ್ವರ್ ಸ್ವತಂತ್ರ ಶಾಸಕರಾಗಿ ಆಯ್ಕೆಯಾಗಿದ್ದರು.