EBM News Kannada
Leading News Portal in Kannada

ಛತ್ತೀಸ್‌ಗಡ | ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗ, ಮೂವರು ಮಾವೊವಾದಿಗಳ ಮೃತ್ಯು | Chhattisgarh

0



ಬಿಜಾಪುರ: ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ರವಿವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗದಲ್ಲಿ ಮೂವರು ಮಾವೊವಾದಿಗಳು ಕೊಲ್ಲಲ್ಪಟ್ಟಿದ್ದಾರೆ.

ಬೆಳಿಗ್ಗೆ ಭದ್ರತಾ ಸಿಬ್ಬಂದಿಗಳ ಜಂಟಿ ತಂಡವು ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಕಾಳಗ ನಡೆದಿದೆ. ಜಿಲ್ಲಾ ಮೀಸಲು ಪಡೆ(ಡಿಆರ್‌ಜಿ),ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಮತ್ತು ಜಿಲ್ಲಾ ಪೋಲಿಸ್ ಪಡೆಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಗುಂಡಿನ ಚಕಮಕಿಯ ಬಳಿಕ ಘಟನಾ ಸ್ಥಳದಲ್ಲಿ ‘ಸಮವಸ್ತ್ರ’ದಲ್ಲಿದ್ದ ಮೂವರು ಮಾವೊವಾದಿಗಳ ಮೃತದೇಹಗಳು, ಬಂದೂಕುಗಳು ಮತ್ತು ಸ್ಫೋಟಕಗಳು ಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಬಸ್ತಾರ್ ವಲಯದ ಐಜಿಪಿ ಸುಂದರರಾಜ್ ಪಿ. ತಿಳಿಸಿದರು.

ಇದರೊಂದಿಗೆ ರಾಜ್ಯದಲ್ಲಿ ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಈವರೆಗೆ ಮೃತಪಟ್ಟ ಮಾವೊವಾದಿಗಳ ಸಂಖ್ಯೆ 12ಕ್ಕೇರಿದೆ. ಕಳೆದ ವರ್ಷ ರಾಜ್ಯದಲ್ಲಿ 219 ಮಾವೊವಾದಿಗಳು ಭದ್ರತಾ ಪಡೆಗಳ ಗುಂಡುಗಳಿಗೆ ಬಲಿಯಾಗಿದ್ದರು.

Leave A Reply

Your email address will not be published.