ಐಎನ್ಎಕ್ಸ್ ಮೀಡಿಯಾ ಪ್ರಕರಣ: ಜೂನ್ 6ಕ್ಕೆ ಸಿಬಿಐ ನಿಂದ ಚಿದಂಬರಂ ವಿಚಾರಣೆ
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಜೂನ್ 6ರಂದು ಕೇಂದ್ರೀಯ ತನಿಖಾ ದಳ ವಿಚಾರಣೆ ನಡೆಸಲಿದೆ.
ಗುರುವಾರವಷ್ಟೇ ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಜುಲೈ 3ರವರೆಗೆ ಚಿದಂಬರಂ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನಿಡಿತ್ತು.
ಏರ್ಸೆಲ್-ಮ್ಯಾಕ್ಸಿಸ್ 3,500 ಕೋಟಿ ರೂ. ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ 305 ಕೋಟಿ ರೂ.ಗಳ ಅಕ್ರಮ ವ್ಯವಹಾರದಲ್ಲಿ ಚಿದಂಬರಂ ಕೈವಾಡ ಕಂಡುಬಂದಿದೆ ಎಂದು ತನಿಕಾ ದಳಗಳು ಹೇಳಿದೆ. ಯುಪಿಎ-1 ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ಈ ಎರಡೂ ಸಂಸ್ಥೆಗಳಿಗೆ ಅನುಕೂಲವಾಗುವಂತೆ ವಿದೇಶೀ ಹೂಡಿಕೆ ಪ್ರಚಾರ ಮಂಡಳಿಗೆ ಅನುಮತಿ ನೀಡಿದ್ದರು.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಳೆದ ವರ್ಷ ಮೇ 15ರಂದು ಸಿಬಿಐ ಎಫ್ಐಆರ್ ದಾಖಲಿಸಿತ್ತು. ಇದೇ ಪ್ರಕರಣದಲ್ಲಿ 10 ಲಕ್ಷ ರೂ. ಪಡೆದ ಆರೋಪಕ್ಕೆ ಸಂಬಂಧಿಸಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿತ್ತು.