ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಗ್ರೆನೇಡ್ ದಾಳಿ, 10 ಜನರಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ.
ಗ್ರೆನೇಡ್ ದಾಳಿಗೂ ಮುನ್ನ ದಕ್ಷಿಣ ಕಾಶ್ಮೀರ ಶೋಪಿಯಾನ್ ಜಿಲ್ಲೆಯಲ್ಲಿ ಕಲ್ಲೂ ತೂರಾಟ ಘಟನೆ ನಡೆಯುತ್ತಿತ್ತು. ಈ ವೇಳೆ ಪ್ರತಿಭಟನಾಕಾರರ ಮಧ್ಯೆ ಬಂದಿರುವ ಉಗ್ರರು ಏಕಾಏಕಿ ಗ್ರೆನೇಡ್ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಗ್ರೆನೇಡ್ ದಾಳಿಯಲ್ಲಿ ಪೇದೆ ಸೇರಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ.
ಇನ್ನು ಸ್ಥಳದಲ್ಲಿದ್ದ ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಪೊಲೀಸರು ಅಶ್ರುವಾಯು ಪ್ರಯೋಗ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.