ಕೈ ಮುಗಿದು ಕೋರುತ್ತೇನೆ, ಪ್ರತಿಭಟನೆ ಅಂತ್ಯಗೊಳಿಸಿ: ಪ್ರಧಾನಿಗೆ ಕೇಜ್ರಿವಾಲ್ ಪತ್ರ
ದೆಹಲಿ: ಐಎಎಸ್ ಅಧಿಕಾರಿಗಳು ತಮ್ಮ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರದಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ದೆಹಲಿ ತುಂಬಾ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುತ್ತಿದೆ, ಲೆಫ್ಟಿನೆಂಟ್ ಗವರ್ನರ್ ಮಧ್ಯ ಪ್ರವೇಶಿಸಲು ನಿರಾಕರಿಸುತ್ತಿದ್ದಾರೆ, ಐಎಎಸ್ ಅಧಿಕಾರಗಳ ಮೇಲೆ ಕೇಂದ್ರ ಸರ್ಕಾರಕ್ಕೆ ಎಲ್ಲಾ ರೀತಿಯ ಅಧಿಕಾರವಿರುತ್ತದೆ, ನಾನು ನಿಮ್ಮಲ್ಲಿ ಕೈ ಜೋಡಿಸಿ ಕೇಳಿಕೊಳ್ಳುತ್ತೇನೆ ಮುಷ್ಕರ ನಿಲ್ಲಿಸುವಂತೆ ಹೇಳಿ ಎಂದು ಕೇಜ್ರಿವಾಲ್ ಪತ್ರದಲ್ಲಿ ತಿಳಿಸಿದ್ದಾರೆ,
ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪಕ್ಷ ಕೆಲಸ ಮಾಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ದೆಹಲಿಯ ರಾಜ್ಯಪಾಲರ ನಿವಾಸದಲ್ಲಿ ಕೈಗೊಂಡಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ.
ಲೆಫ್ಟಿನೆಂಟ್ ಗವರ್ನರ್ ಮೇಲೆ ಕೇಂದ್ರ ಸರ್ಕಾರಕ್ಕೆ ಹಿಡಿತವಿರುತ್ತದೆ.ಹೀಗಾಗಿ ಜನ ಹೇಳುತ್ತಿದ್ದಾರೆ ಐಎಎಸ್ ಅಧಿಕಾರಿಗಳ ಮುಷ್ಕರದ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿದೆ ಎಂಗು ಹೇಳುತ್ತಿದ್ದಾರೆ ಎಂದು ಕೇಜ್ರಿವಾಲ್ ಪತ್ರದಲ್ಲಿ ಬರೆದಿದ್ದಾರೆ.
ಐಎಎಸ್ ಅಧಿಕಾರಿಗಳ ಪ್ರತಿಭಟನೆಯಿಂದಾಗಿ ಸರ್ಕಾರದ ಹಲವು ಅಭಿವೃದ್ಧಿ ಯೋಜನೆಗಳು ರದ್ದಾಗಿವೆ ಹೀಗಾಗಿ ನೀವು ಅಥವಾ ಲೆಫ್ಟಿನೆಂಟ್ ಗವರ್ನರ್ ಮಾತ್ರ ಪ್ರತಿಭಟನೆಗೆ ಅಂತ್ಯಗೊಳಿಸಲು ಸಾಧ್ಯ ಎಂದು ಹೇಳಿದ್ದಾರೆ. ಇನ್ನೂ ಕೇಜ್ರಿವಾಲ್ ಮತ್ತು ಅವರ ಸಹೋದ್ಯೋಗಿಗಳ ಪ್ರತಿಭಟನೆಗೆ ಹಲವು ಎಎಪಿ ಕಾರ್ಯಕರ್ತರು ಬೆಂಬಲ ಸೂಚಿಸಿದ್ದಾರೆ.
ಶೀಘ್ರವೇ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೇಟ್ ಮಾಡಿದ್ದಾರೆ. ಬಿಜೆಪಿ ಮಾಜಿ ಮುಖಂಡ ,ಯಶ್ವಂತ್ ಸಿನ್ಹಾ ಇದರೊಂದಿಗೆ ಕೈ ಜೋಡಿಸಿದ್ದಾರೆ.