ಬುಖಾರಿ ಹತ್ಯೆ ಪ್ರಕರಣ: ಕಾಶ್ಮೀರ ಪರಿಸ್ಥಿತಿ ಕುರಿತು ಗೃಹ ಸಚಿವರನ್ನು ಭೇಟಿಯಾದ ಪ್ರಧಾನಿ ಮೋದಿ
ನವದೆಹಲಿ; ರೈಸಿಂಗ್ ಕಾಶ್ಮೀರ್’ ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹಾಗೂ ಅವರ ಇಬ್ಬರು ಅಂಗರಕ್ಷಕರ ಹತ್ಯೆ ಹಿನ್ನಲೆಯಲ್ಲಿ ಕಾಶ್ಮೀರ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡತಂದಿದ್ದು, ಈ ನಡುವಲ್ಲೇ ಕಾಶ್ಮೀರ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಲು ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಕಾಶ್ಮೀರ ಪರಿಸ್ಥಿತಿ ಕುರಿತಂತೆ ನಿನ್ನೆಯಷ್ಟೇ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿಯವರು 1 ಗಂಟೆಗಳ ಕಾಲ ಸಭೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.
ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದ್ದರು ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಅಮಿತ್ ಶಾ ಮತ್ತು ಮಾಧವ್ ಅವರು ಭಯೋತ್ಪಾದನೆ ವಿರುದ್ಧ ಕಠಿಣ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆಂದು ತಿಳಿದುಬಂದಿದೆ.
ಇಲ್ಲದೆ, ರಂಜಾನ್ ತಿಂಗಳಿನಲ್ಲಿ ಕದನ ವಿರಾಮ ಕುರಿತಂತೆ ತೆಗೆದುಕೊಂಡ ನಿರ್ಧಾರವನ್ನು ಮತ್ತೆ ಮುಂದುವರೆಸಲು ಸಭೆಯಲ್ಲಿ ಚಿಂತನೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ.