ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ; ಜೀಪ್’ಗೆ ಟ್ರಾಕ್ಟರ್ ಡಿಕ್ಕಿ; 12 ಮಂದಿ ದುರ್ಮರಣ
ಮೊರೆನಾ; ಮಧ್ಯಪ್ರದೇಶದ ಮೊರೆನಾದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಜೀಪ್’ಗೆ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 12 ಮಂದಿ ದುರ್ಮರಣವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಮಧ್ಯಪ್ರದೇಶದ ರಾಜಧಾನಿ ಭೋಪಾಲ್’ನಲ್ಲಿರುವ ಮೊರೆನಾ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ದುರ್ಘಟನೆ ಸಂಭವಿಸಿದೆ. ಪ್ರಾಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವೊಂದಕ್ಕೆ ವೇಗವಾಗಿ ಬರುತ್ತಿದ್ದ ಟ್ರಾಕ್ಟರ್ ರಭಸದಿಂದ ಡಿಕ್ಕಿ ಹೊಡೆದಿದೆ. ಪರಿಣಾಮ 12 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನೆ ಸಂಭವಿಸುತ್ತಿದ್ದಂತೆಯೇ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು, ಗಾಯಗೊಂಡ ಜನರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.