EBM News Kannada
Leading News Portal in Kannada

ಚನ್ನಪಟ್ಟಣ APMC ಮಾರ್ಕೆಟ್ ಕೊರೋನಾ ಅಡ್ಡೆಯಾಗುತ್ತಾ? ಹೆಚ್. ರಾಜಣ್ಣ ಆತಂಕಕ್ಕೆ ಏನು ಕಾರಣ?

0

ರಾಮನಗರ(ಏ. 20): ಕೊರೋನಾ ವಿಚಾರವಾಗಿ ಇಂದು ಚನ್ನಪಟ್ಟಣ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ರಾಜಣ್ಣ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಚನ್ನಪಟ್ಟಣ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಕೊರೋನಾ ವೈರಸ್ ಹರಡದಿರುವ ಬಗ್ಗೆ ಚರ್ಚೆ ನಡೆಯಿತು.

ನಗರದ ಪ್ರತಿ ವಾರ್ಡ್‌ಗಳಲ್ಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜೊತೆಗೆ ಒಳಚರಂಡಿಗಳಿಗೆ ಸ್ಯಾನಿಟೈಜರ್ ಸಿಂಪಡಣೆ ಮಾಡಬೇಕೆಂದು ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಗ್ರಾಮಾಂತರ ಭಾಗದಲ್ಲೂ ಸಹ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸಹಾಯದೊಂದಿಗೆ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುವ ಜೊತೆಗೆ ಕೊರೋನಾ ವೈರಸ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನ ಕೈಗೊಳ್ಳಬೇಕೆಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸದ್ಯ ರಾಮನಗರ ಜಿಲ್ಲೆಯಲ್ಲಿ ಒಂದೂ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿಲ್ಲ. ಆದರೆ ಚನ್ನಪಟ್ಟಣದ APMC ಮಾರ್ಕೆಟ್‌ಗೆ ಮಹಾರಾಷ್ಟ್ರ ಸೇರಿ ಹೊರರಾಜ್ಯಗಳಿಂದ ಮಾವಿನಕಾಯಿ ಮಾರಾಟಕ್ಕೆ ಟ್ರಕ್‌ಗಳ ಮೂಲಕ ಚಾಲಕರು, ಕ್ಲೀನರ್‌ಗಳು ಬರ್ತಿದ್ದಾರೆ. ಆದರೆ ಅವರಿಗೆ ಸ್ಥಳದಲ್ಲಿ ಆರೋಗ್ಯ ತಪಾಸಣೆಯಾಗುತ್ತಿಲ್ಲ. ಈಗ ಮಹಾರಾಷ್ಟ್ರದಲ್ಲಿ ಕೊರೋನಾ ಕೇಸ್‌ಗಳು ಹೆಚ್ಚಾಗಿವೆ. ಹಾಗಾಗಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಇಲಾಖೆ ಈ ಬಗ್ಗೆ ಸೂಕ್ತ ಕ್ರಮವಹಿಸಬೇಕೆಂದು ಸಭೆಯಲ್ಲಿ ಅಧ್ಯಕ್ಷರು ಒತ್ತಾಯ ಮಾಡಿದರು.

ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ರಾಜು, ಡಿವೈಎಸ್ಪಿ ಓಂ ಪ್ರಕಾಶ್, ತಹಶೀಲ್ದಾರ್ ಸುದರ್ಶನ್ ಸೇರಿದಂತೆ ಕೃಷಿ ಇಲಾಖೆ, ಎಪಿಎಂಸಿ ಮಾರ್ಕೆಟ್‌ನ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.