EBM News Kannada
Leading News Portal in Kannada

ಕೊರೋನಾ ಹೋರಾಟದಲ್ಲಿ ಪ್ರಾಣ ಕಳೆದುಕೊಳ್ಳುವ ಆರೋಗ್ಯ ಸಿಬ್ಬಂದಿಗೆ 50 ಲಕ್ಷ ಪರಿಹಾರ‌ ಘೋಷಿಸಿದ ಓಡಿಶಾ ಸಿಎಂ

0

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿರುವ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು ಸಹಾಯಕ ಸಿಬ್ಬಂದಿ ಕುಟುಂಬಗಳಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮಂಗಳವಾರ ತಲಾ 50 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಸರ್ಕಾರ ಅವರನ್ನು ಹುತಾತ್ಮರೆಂದು ಪರಿಗಣಿಸುತ್ತದೆ. ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ ಖಾಸಗಿ ಮತ್ತು ಸರ್ಕಾರಿ ಆರೋಗ್ಯ ಸಿಬ್ಬಂದಿ ಕುಟುಂಬಕ್ಕೆ ಒಡಿಶಾ ರಾಜ್ಯ ಸರ್ಕಾರ 50 ಲಕ್ಷ ಪರಿಹಾರ ನೀಡಲಿದೆ ಎಂದು ಸಿಎಂ ಪಟ್ನಾಯಕ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಅವರ ಸರಿಸಾಟಿಯಿಲ್ಲದ ತ್ಯಾಗವನ್ನು ಗುರುತಿಸಿ ಪ್ರಶಸ್ತಿ ಸ್ಥಾಪಿಸಿ. ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ವೈದ್ಯರು, ಆರೋಗ್ಯ ವೃತ್ತಿಪರರು ಮತ್ತು ಇತರ ಬೆಂಬಲ ಸೇವೆಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದಕ್ಕೆ ಜನರು ಕೃತಜ್ಞರಾಗಿರಬೇಕು ಎಂದು ಸಿಎಂ ನವೀನ್ ಪಟ್ನಾಯಕ್ ಮನವಿ ಮಾಡಿದರು. ಅವರ ಕೆಲಸಕ್ಕೆ ತೊಂದರೆಯಾಗುವ ಅಥವಾ ಅವಮಾನಿಸುವ ಯಾವುದೇ ಕೃತ್ಯದಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ಸಹ ನೀಡಿದ್ದಾರೆ.

Leave A Reply

Your email address will not be published.