ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ತುರ್ತು ಸಭೆ; ರೈತರಿಗೆ ನೆರವು ಸೇರಿ ಹಲವು ಮಹತ್ವದ ಸೂಚನೆ
ಬೆಂಗಳೂರು: ಕೋವಿಡ್- 19 ನಿಯಂತ್ರಣಕ್ಕೆ ಹೇರಲಾಗಿರುವ ಲಾಕ್ಡೌನ್ನಿಂದ ಅಭಿವೃದ್ಧಿ ಕಾರ್ಯಗಳು ಗತಿ ಕಳೆದುಕೊಂಡಿರುವುದನ್ನು ಗಮನದಲ್ಲಿಟ್ಟುಕೊಂಡು ಆಡಳಿತ ಯಂತ್ರ ಚುರುಕುಗೊಳಿಸಲು ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸತತ ನಾಲ್ಕು ಗಂಟೆ ತುರ್ತು ಸಭೆ ನಡೆಸಿದರು. ಈ ಸಭೆಯ ಮುಖ್ಯಾಂಶಗಳು ಹೀಗಿವೆ…
ರೈತರು ಬೆಳೆದ ತರಕಾರಿಗಳು ಕೋವಿಡ್ನಿಂದಾಗಿ ಬೆಲೆ ಕಳೆದುಕೊಂಡಿದ್ದು, ಅದನ್ನು ನಾವೇ ಕೊಂಡುಕೊಂಡು ಕೋಲ್ಡ್ ಸ್ಟೋರೇಜ್ನಲ್ಲಿ ಇಟ್ಟು ತದನಂತರ ಮಾರಾಟ ಮಾಡುವಂತೆ ಸೂಚನೆ
ಹೆಚ್ಚುದಿನ ಇಡುವುದಕ್ಕೆ ಸಾಧ್ಯವಾಗದ ತರಕಾರಿಗಳು, ಹಣ್ಣುಗಳು ಸೇರಿದಂತೆ ರೈತರು ಬೆಳೆಯುವ ಬೆಳೆಗಳನ್ನು ಇತರೆ ರಾಜ್ಯಗಳಿಗೆ ಮತ್ತು ಹೊರದೇಶಗಳಿಗೆ ಕಳುಹಿಸಿ ಮಾರಾಟ ಮಾಡುವಂತೆ ಸೂಚನೆ ನೀಡಿಲಾಯಿತು
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಎಲ್ಲೆಲ್ಲಿ ನೀರಿನ ಅಭಾವವಿದೆಯೋ ಅಲ್ಲೆಲ್ಲ ತುರ್ತಾಗಿ ನೀರಿನ ಸರಬರಾಜು ಮಾಡುವಂತೆ ಸೂಚನೆ ನೀಡಲಾಯಿತು
ಅದರಲ್ಲೂ ಕೋವಿಡ್ ಭೀತಿ ಇರುವುದರಿಂದ ಗುಣಮಟ್ಟದ ನೀರನ್ನು ಸರಬರಾಜು ಮಾಡುವಂತೆ ಸೂಚನೆ ನೀಡಲಾಯಿತು
ಕೋವಿಡ್ ಬಗ್ಗೆ ಗ್ರಾಮ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಅದನ್ನು ಇನ್ನಷ್ಟು ಚುರುಕುಗೊಳಿಸಲು ಸೂಚನೆ ನೀಡಲಾಯಿತು
ಮಾನ್ಯ ಮುಖ್ಯಮಂತ್ರಿ ಗಳು ಕೇಂದ್ರ ಸಚಿವರಾದ ಸದಾನಂದಗೌಡ ಅವರಿಗೆ ಕರೆ ಮಾಡಿ ಗೊಬ್ಬರಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದರು
ಅಂತರಾಷ್ಟ್ರೀಯ ಮಟ್ಟದಲ್ಲಿ ಗೊಬ್ಬರಕ್ಕೆ ಬೇಡಿಕೆ ಕಡಿಮೆ ಇರೋದರಿಂದ ಇರುವ ಬೆಲೆಗಿಂತ ರೈತರಿಗೆ ಕಡಿಮೆ ಬೆಲೆಗೆ ಗೊಬ್ಬರು ಮಾರಾಟ ಮಾಡಲಾಗುವುದು ಎಂದು ಕೇಂದ್ರ ಸಚಿವರು ಮನದಟ್ಟು ಮಾಡಿದರು. ಇದನ್ನು ರೈತರಿಗೆ ಮನವರಿಕೆ ಮಾಡಿ ಆತಂಕ ದೂರು ಮಾಡಲು ಸೂಚನೆ ನೀಡಲಾಯಿತು
ನಗರಗಳಲ್ಲಿ ವಿವಿಧ ಸಂಘ ಸಂಸ್ಥೆಗಳು ಸರ್ಕಾರಿ ಜಾಗವನ್ನು ಲೀಸ್ ಗೆ ಪಡೆದು ಇದುವರೆಗು ಕೆಲಸ ಶುರು ಮಾಡದೆ ಲೀಸ್ ಕಂಡಿಷನ್ ಉಲ್ಲಂಘನೆ ಮಾಡಿದ ಜಾಗಗಳನ್ನು ಸರ್ಕಾರಕ್ಕೆ ವಾಪಸ್ ಪಡೆಯಲು ಸೂಚನೆ ನೀಡಲಾಯಿತು
ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಡ್ಯಾಮ್ಗಳಲ್ಲಿ ಹೆಚ್ಚು ನೀರು ಸಂಗ್ರಹವಾಗಿದ್ದರೆ ಅದನ್ನು ರೈತರ ಬೆಳೆಗಳಿಗೆ ಮತ್ತು ಕುಡಿಯುವ ನೀರಿಗೆ ಬಿಡಲು ಸೂಚನೆ ನೀಡಲಾಯಿತು
ಕಳೆದ ವರ್ಷ ಆದ ಅನಾಹುತ ಮತ್ತೆ ಮರುಕಳಿಸದಂತೆ ಡ್ಯಾಮ್ಗಳಲ್ಲಿ ಪ್ರತಿನಿತ್ಯ ಲಭ್ಯವಿರುವ ನೀರಿನ ಮಾಹಿತಿಯನ್ನು ಪಡೆಯಲು ಸೂಚನೆ ನೀಡಲಾಯಿತು
ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಕೋವಿಡ್ನಿಂದಾಗಿ ಅಂತರಾಷ್ಟ್ರೀಯ ಪ್ರವಾಸಿಗರ ಸಂಖ್ಯೆ ಕಡಿಮೆಯಾಗೋದರಿಂದ ದೇಶೀಯ ಪ್ರವಾಸಿಗರನ್ನು ಆಕರ್ಷಣೆ ಮಾಡುವತ್ತ ಗಮನ ಹರಿಸಲು ಸೂಚನೆ ನೀಡಲಾಯಿತು
ಇದರ ಜೊತೆಗೆ ಅಲ್ಲಿ ಕೋವಿಡ್ ಇಲ್ಲ ಅನ್ನೋದನ್ನು ಪ್ರವಾಸಿಗರಿಗೆ ಹೆಚ್ಚು ಹೆಚ್ಚು ಪ್ರಚಾರ ಮಾಡಬೇಕು ಅಂತ ಸೂಚನೆ ನೀಡಲಾಯಿತು
ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಆನ್ ಲೈನ್ ತರಬೇತಿ ನೀಡಲು ಸೂಚನೆ ನೀಡಲಾಯಿತು
ಶಾಲೆ ತೆರೆಯುವವರೆಗೆ ದೂರದರ್ಶನದ ಮೂಲಕ ಮಕ್ಕಳಿಗೆ ಪಾಠ ಸೇರಿದಂತೆ ಇತರೆ ಚಟುವಟಿಕೆಗಳನ್ನು ನೀಡಲು ಸೂಚನೆ ನೀಡಲಾಯಿತು
ಸಾರಿಗೆ ಇಲಾಖೆಯಲ್ಲಿ ಕೋವಿಡ್ ನಿಂದ ಬಸ್ ಸಂಚಾರ ಕಡಿಮೆ ಇರುವುದರಿಂದ ಕೆಎಸ್ಆರ್ಟಿಸಿ ನೂರಾರು ಕೋಟಿ ನಷ್ಟದಲ್ಲಿದೆ . ಹಾಗಾಗಿ ಬಸ್ಗಳನ್ನ ಗೂಡ್ಸ್ ಸಾರಿಗೆಯಾಗಿ ಬಳಸಿಕೊಂಡು ಅದರ ಮೂಲಕ ಆದಾಯ ಪಡೆಯಲು ಸೂಚನೆ ನೀಡಲಾಯಿತು
ಖಾಸಿಗಿ ಕಂಪನಿಗಳಿಗೆ ಬಸ್ಗಳನ್ನು ಗುತ್ತಿಗೆ ಆಧಾರದ ಮೇಲೆ ನೀಡಲು ತೀರ್ಮಾನ ಮಾಡಲಾಯಿತು
ಕಲ್ಯಾಣ ಕರ್ನಾಟಕ ಮತ್ತು ಇತರೆ ಅಭಿವೃದ್ಧಿ ಮಂಡಳಿಗಳ ಭಾಗದಲ್ಲಿ ತುರ್ತಾಗಿ ಆಗಬೇಕಾಗಿರುವ ಕೆಲಸ ಕಾರ್ಯಗಳನ್ನು ಮಾಡಲು ಸೂಚನೆ ನೀಡಲಾಯಿತು (ಆಸ್ಪತ್ರೆ ಶಿಕ್ಷಣ ಕುಡಿಯುವ ನೀರು ಇತರೆ)
ಕೋವಿಡ್ ಗಾಗಿ ಹಗಲಿರುಳು ದುಡಿಯುತ್ತಿರುವ ಗುತ್ತಿಗೆ ವೈದ್ಯರ ಸಂಬಳವನ್ನು ಗಣನೀಯವಾಗಿ ಹೆಚ್ವಿಸಲು ನಿರ್ಧಾರ ಮಾಡಲಾಯಿತು