ಕೊರೋನಾ: ಹೊರ ರಾಜ್ಯದ 3 ಸಾವಿರಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಆಹಾರ-ದಿನಸಿ ನೀಡಿದ ಬೆಂಗಳೂರು ಪೊಲೀಸರು
ಬೆಂಗಳೂರು(ಏ.26): ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತ ಇಡೀ ಕರ್ನಾಟಕವನ್ನು ಲಾಕ್ ಡೌನ್ ಮಾಡಲಾಗಿದೆ. ಸದಾ ಗಿಜಿಗಿಜಿಗುಡುವ ಬೆಂಗಳೂರು ಜನ ಮತ್ತು ವಾಹನ ಸಂಚಾರ ಹೊರತುಪಡಿಸಿ ಬಹುತೇಕ ಸ್ತಬ್ದಗೊಂಡಿದೆ. ಸರ್ಕಾರದ ಆದೇಶದ ಮೇರೆಗೆ ಕೆಲ ಅಂಗಡಿ-ಮುಂಗಟ್ಟುಗಳಷ್ಟೇ ಬಾಗಿಲು ತೆರೆದಿವೆ. ರಸ್ತೆ ಬದಿ ಹೋಟೆಲ್ಗಳೆಲ್ಲವೂ ಬಂದ್ ಆಗಿವೆ. ಬಡವರಿಗೆ ಊಟ ಮಾಡಲು ಅವಕಾಶ ಇದ್ದ ಇಂದಿರಾ ಕ್ಯಾಂಟೀನ್ಗಳೂ ಮುಚ್ಚಿವೆ. ರಸ್ತೆಬದಿ ಹೋಟೆಲ್ಗಳನ್ನು ನಂಬಿಕೊಂಡಿದ್ದ ನಿರ್ಗತಿಕರು ಊಟಕ್ಕಾಗಿ ಪರದಾಡುವಂತಾಗಿದೆ. ಇಂಥ ಪರಿಸ್ಥಿತಿಯಲ್ಲಿ ಬಡವರು ಮತ್ತು ನಿರ್ಗತಿಕರ ಸಹಾಯಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.
ರಾಜ್ಯ ಸರ್ಕಾರದ ಆದೇಶದ ಮೇರೆಗೆ ಪೊಲೀಸರು ನಿರ್ಗತಿಕರು ಮತ್ತು ಹೊರ ರಾಜ್ಯಗಳ ಕೂಲಿ ಕಾರ್ಮಿಮಿಕರಿಗೆ ಆಹಾರ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ನಗರದ ಆಗ್ನೇಯ ವಿಭಾಗದಲ್ಲಿರುವ ಹೊರ ರಾಜ್ಯದಿಂದ ಬಂದ 3 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ಆಹಾರ ಒದಗಿಸಿದರು. ದಾನಿಗಳ ಸಹಕಾರದೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ರೇಷನ್ ವಿತರಣೆ ಮಾಡಿದರು. ಜತೆಗೆ ವಲಸೆ ಕಾರ್ಮಿಕರಿಗೆ ತಮ್ಮ ಕೈಯಾರೆ ಊಟ ಬಡಿಸಿ ಮಾನವೀಯತೆ ಮೆರೆದರು.
ಡಿಸಿಪಿ ಶ್ರೀನಾಥ್ ಮಹದೇವ್ ಜೋಶಿ, ಎಸಿಪಿ ಕರಿಬಸವನಗೌಡ ನೇತೃತ್ವದಲ್ಲಿ ವಲಸಿಗರ ಕಾರ್ಮಿಕತರಿಗೆ ಆಹಾರ ಕಿಟ್ಗಳು ನೀಡಲಾಗುತ್ತಿದೆ. ಎಚ್ಎಸ್ಆರ್ ಲೇಔಟ್ನಲ್ಲಿ ಹೀಗೆ ದಿನಸಿ ವಿತರಣೆ ಮಾಡುವ ವೇಳೆ ಕಡ್ಡಾಯವಾಗ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ.