ಅಸಮಾಧಾನ ಶಮನಕ್ಕೆ ಮುಂದಾದ ಸಿಎಂ, ಡಿಸಿಎಂ: ಸೋಮವಾರ ಆರು ಜಿಲ್ಲೆಗಳ ಸಚಿವರು, ಶಾಸಕರ ಜೊತೆ ಸಭೆ – Kannada News | CM Siddaramaiah and DCM DK Shivakumar will make district wise meeting with party MLA and Ministers
ಸೋಮವಾರದಿಂದ ಮೂರು ದಿನಗಳ ಕಾಲ ಶಾಸಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾವಾರು ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ಶಾಸಕರ ದೂರು, ಅಹವಾಲನ್ನು ಆಲಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಸೋಮವಾರ (ಆ.07) ರಿಂದ ಶಾಸಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಜಿಲ್ಲಾವಾರು ಸಭೆ ನಡೆಸಲಿದ್ದಾರೆ. ಮೂರು ದಿನಗಳ ಕಾಲ ಕಾಂಗ್ರೆಸ್ ಶಾಸಕರ (Congress MLA) ದೂರು, ಅಹವಾಲನ್ನು ಆಲಿಸಲಿದ್ದಾರೆ. ಮೊದಲ ದಿನ 6 ಜಿಲ್ಲೆಗಳ 31 ಶಾಸಕರು ಹಾಗೂ ಸಚಿವರ ಜೊತೆ ಸಭೆ ನಡೆಸಲಿದ್ದಾರೆ.
ಶಾಸಕರು ಇತ್ತೀಚೆಗೆ ನಡೆದಿದ್ದ ಶಾಸಕಾಂಗ ಸಭೆಯಲ್ಲಿ ಸಚಿವರು ಗೌರವ ಕೊಡ್ತಿಲ್ಲವೆಂದು ಅಸಮಾಧಾನ ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ತಾವೇ ಖುದ್ದು ಅಹವಾಲು ಕೇಳುವುದಾಗಿ ಸಭೆಯಲ್ಲಿ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆಗಳು ನಡೆಯಲಿವೆ.
ಸೋಮವಾರ ಬೆಳಗ್ಗೆ 11ರಿಂದ 12ರವರೆಗೆ ತುಮಕೂರು ಸಭೆ: ಬೆಳಗ್ಗೆ 11 ಗಂಟೆಗೆ ಗೃಹ ಸಚಿವರು, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸಚಿವಎನ್.ರಾಜಣ್ಣ, ಶಾಸಕರಾದ ಟಿ.ಬಿ.ಜಯಚಂದ್ರ, ಕೆ.ಷಡಕ್ಷರಿ, ಡಾ.ಎಚ್.ಡಿ.ರಂಗನಾಥ್, ಎಸ್.ಆರ್.ಶ್ರೀನಿವಾಸ್, ಎಚ್.ಬಿ.ವೆಂಕಟೇಶ್, ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ ಅವರೊಂದಿಗೆ ಸಭೆ.
ಮಧ್ಯಾಹ್ನ 12 ರಿಂದ 1 ಗಂಟೆವರೆಗೆ ಯಾದಗಿರಿ ಸಭೆ: ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಸುರಪುರ ಶಾಸಕ ರಾಜಾ ವೆಂಕಟಪ್ಪನಾಯಕ, ಯಾದಗಿರಿ ಶಾಸಕ ಚೆನ್ನಾರೆಡ್ಡಿ, ಪಾಟೀಲ್ ತನ್ನೂರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1ರಿಂದ 2 ಗಂಟೆವರೆಗೆ ಚಿತ್ರದುರ್ಗ ಸಭೆ: ಸಭೆಯಲ್ಲಿ ಜಿಲ್ಲಾ ಉಸ್ತುವಾರಿಸಚಿವಡಿ.ಸುಧಾಕರ್, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಬಿ.ಜಿ. ಗೋವಿಂದಪ್ಪ ಅವರಿಗೆ ಭಾಗವಹಿಸಲು ಆಹ್ವಾನ ನೀಡಲಾಗಿದೆ.
ಸಂಜೆ 4 ರಿಂದ ಬಾಗಲಕೋಟಿ ಸಭೆ: ಸಂಜೆ 4 ಗಂಟೆಯಿಂದ 5 ಗಂಟೆವರೆಗೆ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ .ಬಿ.ತಿಮ್ಮಾಪುರ, ಶಾಸಕರಾದ ಜೆ.ಟಿ.ಪಾಟೀಲ್, ಬಿ.ಬಿ.ಚಿಮ್ಮನಕಟ್ಟಿ, ಎಚ್.ವೈ.ಮೇಟಿ, ವಿಜಯಾನಂದ ಕಾಶಪ್ಪನವರ್ ಅವರೊಂದಿಗೆ ಮುಖ್ಯ ಮಂತ್ರಿಗಳು ಸಭೆ ನಡೆಸಲಿದ್ದಾರೆ.
ಸಂಜೆ 5 ರಿಂದ ಬಳ್ಳಾರಿ ಸಭೆ: ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ ಅವರು ಬಳ್ಳಾರಿ ಶಾಸಕರ ಅಹವಾಲು ಆಲಿಸುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 6ರಿಂದ ಧಾರವಾಡ ಸಭೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ನವಲಗುಂದ ಶಾಸಕ ಕೋನರೆಡ್ಡಿ, ಧಾರವಾಡದ ವಿನಯ್ ಕುಲಕರ್ಣಿ, ಹುಬ್ಬಳ್ಳಿ-ಧಾರವಾಡ ಪೂರ್ವ ಅಬ್ಬಯ್ಯ ಪ್ರಸಾದ್, ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಧಾರವಾಡ ಸಭೆಯಲ್ಲಿ ಹಾಜರಿದ್ದು ಅಹವಾಲು ಹೇಳಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ