ಮತ್ತೆ ವಿದೇಶಕ್ಕೆ ಹಾರಿದ ಕುಮಾರಸ್ವಾಮಿ, ಈ ಬಾರಿ ಯಾರ ಜೊತೆಗೆ ಹೋಗಿದ್ದಾರೆ ಗೊತ್ತಾ? – Kannada News | HD Kumaraswamy Once again flies Foreign Trip malaysia With His Party Leaders
ಇತ್ತೀಚೆಗಷ್ಟೇ ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಈಗ ಮತ್ತೆ ವಿದೇಶಕ್ಕೆ ಹಾರಿದ್ದಾರೆ.
Image Credit source: PTI
ಬೆಂಗಳೂರು, (ಆಗಸ್ಟ್ 08): ಮೊನ್ನೇ ಅಷ್ಟೇ ಕುಟುಂಬದ ಜೊತೆ ಯುರೋಪ್ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ(HD Kumaraswamy), ಇದೀಗ ಮತ್ತೆ ವಿದೇಶಕ್ಕೆ (Foreign) ಹಾರಿದ್ದಾರೆ. ಹೌದು.. ಇತ್ತೀಚೆಗಷ್ಟೇ ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಈಗ ಮತ್ತೆ ಸಿಂಗಾಪುರಕ್ಕೆ ತೆರಳಿದ್ದಾರೆ. ನಿನ್ನೆ(ಆಗಸ್ಟ್ 07) ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಆಪ್ತರ ಜೊತೆಗೆ ಮಲೇಶಿಯಾದ ಕೌಲಾಲಂಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಕುಮಾರಸ್ವಾಮಿ ಸೇರಿದಂತೆ ಒಟ್ಟು ಐವರು ಸೋಮವಾರ ರಾತ್ರಿ 12 ಗಂಟೆಯ ವಿಮಾನದಲ್ಲಿ ಮಲೇಶಿಯಾದ ಕೌಲಾಲಂಪುರಕ್ಕೆ ತೆರಳಿದ್ದಾರೆ. ಇನ್ನು ಈ ಬಾರಿಯ ವಿದೇಶ ಪ್ರವಾಸಕ್ಕೆ ಕುಮಾರಸ್ವಾಮಿಗೆ ಮಾಜಿ ಸಚಿವ ಸಾರಾ ಮಹೇಶ್, ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಸಾಥ್ ನೀಡಿದ್ದಾರೆ. ಕುಮಾರಸ್ವಾಮಿ ಅವರು ಈ ವಿದೇಶ ಪ್ರಯಾಣ ತೀವ್ರ ಕುತೂಹಲ ಮೂಡಿಸಿದೆ. ಆದ್ರೆ, ಯಾವ ಕಾರಣಕ್ಕೆ ಹೋಗಿದ್ದಾರೆ ಎಂದು ಕಾರಣ ತಿಳಿದುಬಂದಿಲ್ಲ.
ಕಳೆದ ವಾರ ಅಷ್ಟೇ ಕುಮಾರಸ್ವಾಮಿ ಕುಟುಂಬದ ಜೊತೆ ಯುರೋಪ್ ಪ್ರವಾಸಕ್ಕೆ ತೆರಳಿದ್ದರು. ಕುಮಾರಸ್ವಾಮಿ ವಿದೇಶ ಪ್ರವಾಸ ಬೆನ್ನಲ್ಲೇ ಇತ್ತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದರು. ಸಿಂಗಾಪುರಕ್ಕೆ ಹೋಗಿ ನಮ್ಮ ಸರ್ಕಾರವನ್ನು ಬೀಳಿಸುವ ಹುನ್ನಾರ ನಡೆಯುತ್ತಿದೆ ಎಂದು ಹೇಳಿದ್ದರು. ಇದೀಗ ಮತ್ತೆ ಕುಮಾರಸ್ವಾಮಿ ವಿದೇಶಕ್ಕೆ ಹಾರಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ