ಬೆಂಗಳೂರು, ಜೂನ್ 2: ಎರಡು ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಸ್ತುವಾರಿಗಳನ್ನು ನೇಮಿಸಿದ್ದಾರೆ.
ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧಿಕಾರ ಪಡೆದುಕೊಳ್ಳುವಲ್ಲಿ ರಮೇಶ್ ಜಾರಕಿಹೊಳಿ ಕೊನೆಗೂ ಯಶಸ್ವಿಯಾಗಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರಿಗೆ ಹಾಸನ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.
ಆಹಾರ ಸಚಿವ ಕೆ ಗೋಪಾಲಯ್ಯಗೆ ಹಾಸನ ಉಸ್ತುವಾರಿ ನೀಡಲಾಗಿದೆ. ಈ ಮೊದಲು ಹಾಸನ ಸಚಿವ ಮಾಧುಸ್ವಾಮಿ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಆ ಜವಾಬ್ದಾರಿಯನ್ನು ಗೋಪಾಲಯ್ಯಗೆ ನೀಡಲಾಗಿದೆ.
ಮೊದಲು ಜಿಲ್ಲಾ ಉಸ್ತುವಾರಿ ನೇಮಕ ಮಾಡಿದಾಗ ಬೆಳಗಾವಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಗದೀಶ್ ಶೆಟ್ಟರ್ ಗೆ ನೀಡಿದ್ದರು.
ಬೆಳಗಾವಿ ಉಸ್ತುವಾರಿ ಸ್ಥಾನದ ಮೇಲೆ ಈ ಮೊದಲು ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಲಕ್ಷ್ಮಣ್ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಪೈಪೋಟಿ ಉಂಟಾಗಿದ್ದರಿಂದ ಬೆಳಗಾವಿಯನ್ನು ಇವರಿಗೆ ಕೊಡದೆ ಸಚಿವ ಜಗದೀಶ್ ಶೆಟ್ಟರ್ ಗೆ ಸಿಎಂ ವಹಿಸಿದ್ದರು. ಇದೀಗ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿ ಉಸ್ತುವಾರಿ ನೀಡಲಾಗಿದೆ.