Ultimate magazine theme for WordPress.

ಶಾಲೆ ತೆರೆಯವ ವಿಚಾರ; ಜೂ.10ರಿಂದ ಪೋಷಕರ ಸಭೆ

0

ಬೆಂಗಳೂರು, ಜೂನ್ 02 : ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆಯಾದ ಬಳಿಕ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಜುಲೈನಿಂದ ಅವುಗಳನ್ನು ಪುನಃ ತೆರೆಯಲು ಕೇಂದ್ರ ಗೃಹ ಇಲಾಖೆ ಒಪ್ಪಿಗೆ ನೀಡಿದೆ.

ಶಾಲೆಗಳನ್ನು ತೆರೆಯುವ ಮೊದಲು ಪೋಷಕರ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಣೆ ಮಾಡಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿದೆ. ಕರ್ನಾಟಕದ ಶಿಕ್ಷಣ ಇಲಾಖೆ ಜೂನ್ 10 ರಿಂದ 12ರ ತನಕ ಪೋಷಕರ ಜೊತೆ ಸಭೆ ನಡೆಸಲಿದೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. “ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನಃ ಆರಂಭಿಸುವ ಕುರಿತು ಪೋಷಕರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

Leave A Reply

Your email address will not be published.