ಭಾರತ-ವೆಸ್ಟ್ ಇಂಡೀಸ್ 3ನೇ ಟಿ20 ಯಾವಾಗ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ – Kannada News | When and How to watch India vs West Indies 3rd T20I
India vs West Indies: ಭಾರತದ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್ಗಳಲ್ಲಿ ರೋವ್‌ಮನ್ ಪೊವೆಲ್ ನಾಯಕತ್ವದ ವೆಸ್ಟ್ ಇಂಡೀಸ್ ತಂಡ ಜಯ ಸಾಧಿಸಿದೆ.
India vs West Indies 3rd T20I: ಭಾರತ-ವೆಸ್ಟ್ ಇಂಡೀಸ್ ನಡುವಣ 3ನೇ ಟಿ20 ಪಂದ್ಯವು ನಾಳೆ (ಆಗಸ್ಟ್ 8) ನಡೆಯಲಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಐದು ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ಜಯ ಸಾಧಿಸಿದೆ. ಟ್ರಿನಿಡಾಡ್ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ವಿಂಡೀಸ್ ಪಡೆ 4 ರನ್ಗಳ ರೋಚಕ ಜಯ ಸಾಧಿಸಿತ್ತು.
ಇನ್ನು ಗಯಾನಾದಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಟೀಮ್ ಇಂಡಿಯಾಗೆ ಸೋಲುಣಿಸಿತ್ತು. ಈ ಮೂಲಕ ಕೆರಿಬಿಯನ್ ಪಡೆಯು ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದೀಗ ಮೂರನೇ ಟಿ20 ಪಂದ್ಯದಲ್ಲೂ ವೆಸ್ಟ್ ಇಂಡೀಸ್ ಗೆಲುವು ದಾಖಲಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಇತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಲು ಟೀಮ್ ಇಂಡಿಯಾ 3ನೇ ಪಂದ್ಯದಲ್ಲಿ ಗೆಲ್ಲಲೇಬೇಕು. ಹೀಗಾಗಿ ಈ ಭಾರತ ತಂಡದ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.
ಈ ಪಂದ್ಯದ ಟಾಸ್ ಪ್ರಕ್ರಿಯೆ ಎಷ್ಟು ಗಂಟೆಗೆ?
ಭಾರತ-ವೆಸ್ಟ್ ಇಂಡೀಸ್ ನಡುವಣ 3ನೇ ಟಿ20 ಪಂದ್ಯದ ಟಾಸ್ ಪ್ರಕ್ರಿಯೆ ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ನಡೆಯಲಿದ್ದು, ರಾತ್ರಿ 8 ಗಂಟೆಯಿಂದ ಪಂದ್ಯ ಶುರುವಾಗಲಿದೆ.
ಯಾವ ಮೈದಾನದಲ್ಲಿ ಮ್ಯಾಚ್?
ಈ ಪಂದ್ಯಕ್ಕೂ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅಂದರೆ 2ನೇ ಟಿ20 ಪಂದ್ಯ ಇದೇ ಮೈದಾನದಲ್ಲಿ ನಡೆದಿತ್ತು.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಭಾರತ-ವೆಸ್ಟ್ ಇಂಡೀಸ್ ನಡುವಣ 3ನೇ ಟಿ20 ಪಂದ್ಯವನ್ನು ಡಿಡಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ವೀಕ್ಷಿಸಬಹುದು.
ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?
ಫ್ಯಾನ್ಕೋಡ್ ಆ್ಯಪ್ ಹಾಗೂ ಜಿಯೋ ಸಿನಿಮಾ ಆ್ಯಪ್ ಮತ್ತು ವೆಬ್ಸೈಟ್ನಲ್ಲಿ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಇರಲಿದೆ.
ಭಾರತ ಟಿ20 ತಂಡ:
ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್ ಟಿ20 ತಂಡ:
ರೋವ್‌ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಓಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ , ಓಶಾನೆ ಥಾಮಸ್.