ಏಷ್ಯಾಕಪ್ ಪ್ರೊಮೊ ವಿಡಿಯೋ ಬಿಡುಗಡೆ: ರೋಹಿತ್ ಶರ್ಮಾ ಎಲ್ಲಿ ಎಂದು ಕೇಳಿದ ಫ್ಯಾನ್ಸ್ – Kannada News | Asia Cup 2023 promo Video: Asia Cup 2023 Full Schedule
Asia Cup 2023: ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದ್ದು, ಈ ಟೂರ್ನಿಯ ಎಲ್ಲಾ ಪಂದ್ಯಗಳು ಮಧ್ಯಾಹತ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಈ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಚಾನೆಲ್ಗಳಲ್ಲಿ ಲೈವ್ ವೀಕ್ಷಿಸಬಹುದು.‘
Asia Cup 2023 promo Video
Asia Cup 2023: ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿಯ ಪ್ರೊಮೊ ವಿಡಿಯೋ ಬಿಡುಗಡೆಯಾಗಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ರಿಲೀಸ್ ಮಾಡಿರುವ ಈ ವಿಡಿಯೋದಲ್ಲಿ ಭಾರತೀಯ ಅಭಿಮಾನಿಗಳ ಕಾತುರತೆ, ಭಾವಪರವಶತೆ ಹಾಗೂ ಕೌತುಕತೆಯನ್ನು ತೋರಿಸಲಾಗಿದೆ. ವಿಶೇಷ ಎಂದರೆ ಈ ರೋಚಕ ಕ್ಷಣಗಳ ನಡುವೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಕಾಣಿಸಿಕೊಳ್ಳುತ್ತಾರೆ. ಆದರೆ ಪ್ರಸ್ತುತ ತಂಡದ ನಾಯಕ ರೋಹಿತ್ ಶರ್ಮಾ ಅವರ ಯಾವುದೇ ಕ್ಲಿಪ್ ಅನ್ನು ಇಲ್ಲಿ ಬಳಸಿಕೊಂಡಿಲ್ಲ ಎಂಬುದು ವಿಶೇಷ.
ರೋಹಿತ್ ಶರ್ಮಾ ಎಲ್ಲಿ?
ಈ ವಿಡಿಯೋ ಬಿಡುಗಡೆ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಎಲ್ಲಿ ಎಂಬ ಪ್ರಶ್ನೆಗಳನ್ನು ಅಭಿಮಾನಿಗಳು ಮುಂದಿಟ್ಟಿದ್ದಾರೆ. ಸಾಮಾನ್ಯವಾಗಿ ಆಯಾ ದೇಶದ ನಾಯಕರುಗಳನ್ನು ಟೂರ್ನಿಯ ಪ್ರೊಮೊ ವಿಡಿಯೋದಲ್ಲಿ ಬಳಸಿಕೊಳ್ಳಲಾಗುತ್ತದೆ. ಆದರೆ ಈ ಬಾರಿ ಸ್ಟಾರ್ ಸ್ಪೋರ್ಟ್ಸ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಮತ್ತು ಪೋಸ್ಟರ್ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾಗೆ ಸ್ಥಾನ ನೀಡಿಲ್ಲ.
ಅಲ್ಲದೆ ಏಷ್ಯಾಕಪ್ ಟೂರ್ನಿಯ ಪೋಸ್ಟರ್ನಲ್ಲಿ ಎಲ್ಲಾ ತಂಡಗಳ ನಾಯಕರುಗಳೊಂದಿಗೆ ವಿರಾಟ್ ಕೊಹ್ಲಿಯ ಫೋಟೋ ಬಳಸಲಾಗಿದೆ. ಇದುವೇ ಈಗ ಹಿಟ್ಮ್ಯಾನ್ ಅಭಿಮಾನಿಗಳನ್ನು ಕೆರಳಿಸುವಂತೆ ಮಾಡಿದೆ.
ಕೊಹ್ಲಿ ಬ್ರಾಂಡ್ ಅಂಬಾಸಿಡರ್:
ವಿರಾಟ್ ಕೊಹ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಬ್ರಾಂಡ್ ಅಂಬಾಸಿಡರ್. ಇದೇ ಕಾರಣದಿಂದಾಗಿ ಪ್ರೊಮೊ ವಿಡಿಯೋದಲ್ಲಿ ಕೊಹ್ಲಿಯ ಕ್ಲಿಪ್ ಅನ್ನು ಮಾತ್ರ ಬಳಸಲಾಗಿದೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಕೇಳಿ ಬಂದಿದೆ. ಇದಾಗ್ಯೂ ವಿಡಿಯೋ ಕೊನೆಯಲ್ಲಿ ಕಾಣುವ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ಪೋಸ್ಟರ್ನಲ್ಲಿ ರೋಹಿತ್ ಶರ್ಮಾ ಅವರ ಫೋಟೋ ಬಳಸಲಾಗಿದೆ.
Through thick & thin, fans always have their hands up in support of #TeamIndia. Now, we back them to conquer both Asia & the world! 🙌🏻🏆
Tell us your favourite #HandsUpForIndia moment in the comments.
Tune-in to #AsiaCupOnstar
Aug 30 Onwards | Star Sports Network#Cricket pic.twitter.com/z7zSlbqBfz— Star Sports (@StarSportsIndia) August 8, 2023
ಹ್ಯಾಂಡ್ಸ್ ಅಪ್ ಫರ್ ಇಂಡಿಯಾ:
ಈ ಬಾರಿಯ ಏಷ್ಯಾಕಪ್ನಲ್ಲಿ ಟೀಮ್ ಇಂಡಿಯಾವನ್ನು ಹುರಿದುಂಬಿಸಲು #HandsUpForIndia ಎಂಬ ಹ್ಯಾಶ್‌ಟ್ಯಾಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ಸೃಷ್ಟಿಸಿದ್ದು, ಅಭಿಮಾನಿಗಳು ಭಾರತೀಯ ಅಭಿಮಾನಿಗಳು ಕೈ ಎತ್ತಿ ತಂಡಕ್ಕೆ ಬೆಂಬಲ ಸೂಚಿಸುವಂತೆ ತಿಳಿಸಲಾಗಿದೆ.
ಏಷ್ಯಾಕಪ್ ವೇಳಾಪಟ್ಟಿ:
- ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
- ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
- ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
- ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
- ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
- ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)
ಸೂಪರ್-4 ಹಂತದ ವೇಳಾಪಟ್ಟಿ:
- ಸೆಪ್ಟೆಂಬರ್ 6- A1 Vs B2 (ಲಾಹೋರ್)
- ಸೆಪ್ಟೆಂಬರ್ 9- B1 Vs B2 (ಕೊಲಂಬೊ)
- ಸೆಪ್ಟೆಂಬರ್ 10- A1 Vs A2 (ಕೊಲಂಬೊ)
- ಸೆಪ್ಟೆಂಬರ್ 12- A2 Vs B1 (ಕೊಲಂಬೊ)
- ಸೆಪ್ಟೆಂಬರ್ 14- A1 Vs B1 (ಕೊಲಂಬೊ)
- ಸೆಪ್ಟೆಂಬರ್ 15- A2 Vs B2 (ಕೊಲಂಬೊ)
- ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದ್ದು, ಈ ಟೂರ್ನಿಯ ಎಲ್ಲಾ ಪಂದ್ಯಗಳು ಮಧ್ಯಾಹತ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಈ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಚಾನೆಲ್ಗಳಲ್ಲಿ ಲೈವ್ ವೀಕ್ಷಿಸಬಹುದು.‘
Published On – 5:56 pm, Tue, 8 August 23