ICC World Cup 2023 Revised Schedule: ಭಾರತ- ಪಾಕ್ ಸೇರಿದಂತೆ 9 ಪಂದ್ಯಗಳ ದಿನಾಂಕ ಬದಲಾವಣೆ! ಇಲ್ಲಿದೆ ಪರಿಷ್ಕೃತ ವಿಶ್ವಕಪ್ ವೇಳಾಪಟ್ಟಿ – Kannada News | ICC releases new World Cup 2023 schedule 9 games alongside India Pakistan clash have been rescheduled
ICC World Cup 2023 Revised Schedule: ಹಿಂದಿನ ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲಿ ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಪಂದ್ಯ ಈಗ ಒಂದು ದಿನ ಮುಂಚಿತವಾಗಿ ಅಂದರೆ, ಅಕ್ಟೋಬರ್ 14 ರಂದು ನಡೆಯಲಿದೆ. ಭಾರತ-ಪಾಕಿಸ್ತಾನ ಮಾತ್ರವಲ್ಲ ಒಟ್ಟು 9 ಪಂದ್ಯಗಳ ದಿನಾಂಕ ಬದಲಾಗಿದೆ.

ಏಕದಿನ ವಿಶ್ವಕಪ್
ಕಳೆದ ಕೆಲವು ದಿನಗಳಿಂದ ವಿಶ್ವಕಪ್ ವೇಳಾಪಟ್ಟಿಯ ಬಗ್ಗೆ ಸೃಷ್ಟಿಯಾಗಿದ್ದ ಗೊಂದಲಕ್ಕೆ ಅಂತಿಮವಾಗಿ ತೆರೆಬಿದ್ದಿದೆ. ಕೆಲವು ಕಾರಣಗಳಿಂದಾಗಿ ಈ ಹಿಂದೆ ಪ್ರಕಟಿಸಿದ್ದ ವಿಶ್ವಕಪ್ ವೇಳಾಪಟ್ಟಿಯಲ್ಲಿ ಬದಲಾವಣೆ ತರಲು ಐಸಿಸಿ ಹಾಗೂ ಬಿಸಿಸಿಐ ಮುಂದಾಗಿದ್ದವು. ಇದೀಗ 2023ರ ಏಕದಿನ ವಿಶ್ವಕಪ್ನ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಯಾಗಿದ್ದು ಕೆಲವು ಪ್ರಮುಖ ಪಂದ್ಯಗಳು ನಡೆಯುವ ದಿನಾಂಕದಲ್ಲಿ ಬದಲಾವಣೆಯಾಗಿದೆ. ಅದರಲ್ಲಿ ಪ್ರಮುಖವಾಗಿ ಭಾರಿ ಚರ್ಚೆಗೆ ಒಳಗಾಗಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ಬದಲಾದ ದಿನಾಂಕ ಯಾವುದು ಎಂಬುದುಕ್ಕೆ ಉತ್ತರ ಸಿಕ್ಕಿದೆ. ಹಿಂದಿನ ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನ ಈಗ ಒಂದು ದಿನ ಮುಂಚಿತವಾಗಿ ಅಂದರೆ, ಅಕ್ಟೋಬರ್ 14 ರಂದು ನಡೆಯಲಿದೆ. ಭಾರತ-ಪಾಕಿಸ್ತಾನ ಮಾತ್ರವಲ್ಲದೆ ಒಟ್ಟು 9 ಪಂದ್ಯಗಳ ದಿನಾಂಕ ಬದಲಾಗಿದೆ.
Published On – 5:44 pm, Wed, 9 August 23