EBM News Kannada
Leading News Portal in Kannada

ರೋಚಕತೆ ಸೃಷ್ಟಿಸಿರುವ ಭಾರತ-ವೆಸ್ಟ್ ಇಂಡೀಸ್ ನಾಲ್ಕನೇ ಟಿ20 ಪಂದ್ಯ ಯಾವಾಗ? – Kannada News | India face West Indies in the 4th T20I at the Central Broward Stadium in Lauderhill Florida

0

Vinay Bhat |

Updated on: Aug 10, 2023 | 6:58 AM

When IND vs WI 4th T20I: ವೆಸ್ಟ್ ಇಂಡೀಸ್ ಇನ್ನೊಂದು ಪಂದ್ಯ ಗೆದ್ದರೆ ಸರಣಿ ವಶಪಡಿಸಿ ಐತಿಹಾಸಿಕ ಸಾಧನೆ ಮಾಡಲಿದೆ. ಹೀಗಾಗಿ ನಾಲ್ಕನೇ ಟಿ20 ಪಂದ್ಯದ ಮೇಲೆ ಎಲ್ಲರ ಕಣ್ಣಿದ್ದು, ಉಭಯ ತಂಡಗಳಿಗೆ ಗೆಲುವು ಅನಿವಾರ್ಯ. ಹಾಗಾದ್ರೆ ಈ ಹೈವೋಲ್ಟೇಜ್ ಕದನ ಯಾವಾಗ ನಡೆಯಲಿದೆ?.

Aug 10, 2023 | 6:58 AM

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಟಿ20 ಸರಣಿ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಈಗಾಗಲೇ ನಡೆದಿರುವ ಮೂರು ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 1-2 ರ ಹಿನ್ನಡೆಯಲ್ಲಿದ್ದು, ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಿದೆ.

ಅತ್ತ ವೆಸ್ಟ್ ಇಂಡೀಸ್ ಇನ್ನೊಂದು ಪಂದ್ಯ ಗೆದ್ದರೆ ಸರಣಿ ವಶಪಡಿಸಿ ಐತಿಹಾಸಿಕ ಸಾಧನೆ ಮಾಡಲಿದೆ. ಹೀಗಾಗಿ ನಾಲ್ಕನೇ ಟಿ20 ಪಂದ್ಯದ ಮೇಲೆ ಎಲ್ಲರ ಕಣ್ಣಿದ್ದು, ಉಭಯ ತಂಡಗಳಿಗೆ ಗೆಲುವು ಅನಿವಾರ್ಯ. ಹಾಗಾದ್ರೆ ಈ ಹೈವೋಲ್ಟೇಜ್ ಕದನ ಯಾವಾಗ ನಡೆಯಲಿದೆ?.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ನಾಲ್ಕನೇ ಟಿ20 ಪಂದ್ಯ ಆಗಸ್ಟ್ 12 ಶನಿವಾರದಂದು ನಡೆಯಲಿದೆ. ಇದನ್ನು ಫ್ಲೋರಿಡಾದ ಸೆಂಟ್ರಲ್ ಬ್ರೊವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ತೋರಿ ಗೆಲುವಿನ ಹಾದಿ ಹಿಡಿಯಿತು. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಬ್ರಾಂಡನ್ ಕಿಂಗ್ ಅವರ 42 ರನ್ ಹಾಗೂ ನಾಯಕ ರೋವ್ಮನ್ ಪೊವೆಲ್ ಅವರ ಅಜೇಯ 40 ರನ್​ಗಳ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿತು.

160 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ಉತ್ತಮ ಆರಂಭ ಪಡೆದುಕೊಂಡಿಲ್ಲವಾದರೂ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (83) ಮತ್ತು ತಿಲಕ್ ವರ್ಮಾ (ಅಜೇಯ 49) ಎಚ್ಚರಿಕೆಯಿಂದ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಭಾರತ 17.5 ಓವರ್​ನಲ್ಲೇ 3 ವಿಕೆಟ್ ನಷ್ಟಕ್ಕೆ 164 ರನ್ ಸಿಡಿಸಿ ಜಯ ಕಂಡಿತು.

ಭಾರತ-ವೆಸ್ಟ್ ಇಂಡೀಸ್ ನಡುವಣ ನಾಲ್ಕನೇ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ ಫ್ಯಾನ್ ಮತ್ತು ಜಿಯೋ ಸಿನಿಮಾದಲ್ಲಿ ಲಭ್ಯವಿರುತ್ತದೆ.

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್.

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ನಿಕೋಲಸ್ ಪೂರನ್, ಶಿಮ್ರೋನ್ ಹೆಟ್ಮೆರ್, ಶಾಯ್ ಹೋಪ್, ಬ್ರಾಂಡನ್ ಕಿಂಗ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫೆರನ್ ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಅಕೆಲ್ ಹೊಸೈನ್, ಒಬೆಡ್ ಮೆಕಾಯ್, ಒಶಾನೆ ಥೋಮಸ್.

ತಾಜಾ ಸುದ್ದಿ

Leave A Reply

Your email address will not be published.