ರಾಜ್‌ಕೋಟ್: ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಗೆ ಇಳಿದ ಆಸ್ಟ್ರೇಲಿಯಾ 7 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿ ಭಾರತಕ್ಕೆ ಕಠಿಣ ಸವಾಲು ನೀಡಿದೆ.
ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ (56) ಮತ್ತು ಮಿಚೆಲ್ ಮಾರ್ಶ್ (96) ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ ಉತ್ತಮ ಆರಂಭ ನೀಡಿದರು.
ಭಾರತದ ಪರ ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್ ಪಡೆದರೆ, ಕುಲದೀಪ್ ಯಾದವ್ ಎರಡು ವಿಕೆಟ್ ಪಡೆದರು. ಮುಹಮ್ಮದ್ ಸಿರಾಜ್ ಮತ್ತು ಪ್ರಸಿಧ್ ಕೃಷ್ಣ ತಲಾ ಒಂದು ವಿಕೆಟ್ ಪಡೆದರು.
ಮೊದಲೆರಡು ಪಂದ್ಯಗಳಲ್ಲಿ ಜಯಿಸಿರುವ ಭಾರತ ಇದೀಗ ಆಸ್ಟ್ರೇಲಿಯಾ ವಿರುದ್ಧ 3–0 ಸರಣಿ ಜಯ ಸಾಧಿಸುವ ತವಕದಲ್ಲಿದೆ.
ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ.
ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ 4.1 ಓವರ್ ಗೆ 24 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮ ಹಾಗೂ ವಾಶಿಂಗ್ಟನ್ ಸುಂದರ್ ಕ್ರೀಸ್ ನಲ್ಲಿದ್ದಾರೆ.