ಮಂಗಳೂರು, ನ.19: ಇಂದು ಮಧ್ಯಾಹ್ನ ಗುಜರಾತ್ ನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದ ವೀಕ್ಷಣೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ದೊಡ್ಡ ಪರದೆ ವ್ಯವಸ್ಥೆ ಮಾಡಿದೆ. ಕ್ರಿಕೆಟ್ ಪ್ರೇಮಿಗಳಿಗೆ ಇಲ್ಲಿ ಪಂದ್ಯ ವೀಕ್ಷಣೆಗೆ ಪ್ರವೇಶಾವಕಾಶ ಉಚಿತವಾಗಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ಅಪರಾಹ್ನ 2 ಗಂಟೆಗೆ ನಡೆಯುವ ಫೈನಲ್ ಪಂದ್ಯವನ್ನು ವೀಕ್ಷಿಸಲು ಕ್ರೀಡಾ ಪ್ರೇಮಿಗಳಿಗೆ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲೆ ಇದರ ವತಿಯಿಂದ ಮಂಗಳಾ ಕ್ರೀಡಾಂಗಣದಲ್ಲಿ 8×12 ಎಲ್.ಇ.ಡಿ. ಡಿಸ್ ಪ್ಲೇ ವ್ಯವಸ್ಥೆ ಕಲ್ಪಿಸಲಾಗಿದೆ.
ಉತ್ತಮ ಎಲ್.ಇ.ಡಿ. ಸ್ಕ್ರೀನ್ ಮತ್ತು ಸೌಂಡ್ ಸಿಸ್ಟಮ್ ನೊಂದಿಗೆ ಫೈನಲ್ ಪಂದ್ಯದ ನೇರ ಪ್ರಸಾರವನ್ನು ದೊಡ್ಡ ಪರದೆಯಲ್ಲಿ ಸಾರ್ವಜನಿಕರು ಇಲ್ಲಿ ವೀಕ್ಷಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದೆ ದ.ಕ. ಜಿಲ್ಲಾ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.