EBM News Kannada
Leading News Portal in Kannada

ಭಾರತ-ಪಾಕ್ ವಿಶ್ವಕಪ್ ಪಂದ್ಯ ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ನಿಧನ

0


ಮುಂಬೈ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮುಂಬೈ ಕ್ರಿಕೆಟ್ ಸಂಸ್ಥೆ(ಎಂಸಿಎ)ಅಧ್ಯಕ್ಷ ಅಮೋಲ್ ಕಾಳೆ ಅವರು ಸೋಮವಾರ ನ್ಯೂಯಾರ್ಕ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾಳೆ ಅವರು ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ-20 ವಿಶ್ವಕಪ್ ಪಂದ್ಯವನ್ನು ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದರು. ಕಾಳೆ ಅವರಿಗೆ 47 ವರ್ಷ ವಯಸ್ಸಾಗಿತ್ತು.

ಕಾಳೆ ಅವರು ರವಿವಾರ ಎಂಸಿಎ ಕಾರ್ಯದರ್ಶಿ ಅಜಿಂಕ್ಯ ನಾಯಕ್ ಹಾಗೂ ಅಪೆಕ್ಸ್ ಕೌನ್ಸಿಲ್ ಸದಸ್ಯ ಸೂರಜ್ ಸಾಮತ್ ಅವರೊಂದಿಗೆ ನ್ಯೂಯಾರ್ಕ್ ಕ್ರೀಡಾಂಗಣದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ರೋಚಕ ಪಂದ್ಯವನ್ನು ವೀಕ್ಷಿಸಿದ್ದರು.

ಕಾಳೆ 2022ರಲ್ಲಿ ಭಾರತದ ಮಾಜಿ ನಾಯಕ ಸಂದೀಪ್ ಪಾಟೀಲ್‌ರನ್ನು ಸೋಲಿಸಿ ಎಂಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ನಾಗ್ಪುರ ಮೂಲದ ಕಾಳೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಆಪ್ತರಾಗಿದ್ದಾರೆ.

ಕಾಳೆ ಎಂಸಿಎ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮುಂಬೈ ರಣಜಿ ಆಟಗಾರರ ಸಂಭಾವನೆ ದ್ವಿಗುಣಗೊಳಿಸುವ ಮಹತ್ವದ ಹೆಜ್ಜೆ ಇಟ್ಟಿದ್ದರು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತೀಯ ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡುಲ್ಕರ್ ಪ್ರತಿಮೆ ಸ್ಥಾಪಿಸಲು ಕಾರಣರಾಗಿದ್ದರು.

ಈ ವರ್ಷಾರಂಭದಲ್ಲಿ ಆರಂಭವಾಗಿರುವ ಟೆನಿಸ್ ಬಾಲ್ ಫ್ರಾಂಚೈಸಿ ಕ್ರಿಕೆಟ್ ಲೀಗ್ ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್‌ನ ಸಹ ಪ್ರವರ್ತಕರಾಗಿದ್ದರು.

Leave A Reply

Your email address will not be published.