EBM News Kannada
Leading News Portal in Kannada

ರಷ್ಯಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ರೋಹಿತ್ ಶರ್ಮಾ

0

ನವದೆಹಲಿ: 21ನೇ ಫಿಫಾ ವಿಶ್ವಕಪ್ ಪಂದ್ಯಾವಳಿಯ ಕಾವು ಜೋರಾಗಿದೆ. ಇದು ಕ್ರಿಕೆಟ್ ಪ್ರಿಯ ಭಾರತವನ್ನು ಬಿಟ್ಟಿಲ್ಲ.
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ರಷ್ಯಾ ಪ್ರವಾಸದಲ್ಲಿದ್ದು ಫಿಫಾ ವಿಶ್ವಕಪ್ ಪಂದ್ಯಾವಳಿಯ ವೇಳೆ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ.

ಭಾರತದಲ್ಲಿ ಕ್ರಿಕೆಟ್ ಹೊರತಾಗಿ ಇತರೆ ಯಾವುದೇ ಕ್ರೀಡೆಗಳಿಗೆ ಬೆಂಬಲ ಸಿಗುತ್ತಿಲ್ಲ ಎಂಬ ಆರೋಪವಿದೆ. ಆದರೆ ದೇಶದಲ್ಲಿ ಫುಟ್ಬಾಲ್ ಕ್ರೀಡೆ ಅಭಿವೃದ್ಧಿಗೆ ಭಾರತೀಯ ಕ್ರಿಕೆಟಿಗರು ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.

ಇತ್ತೀಚೆಗಷ್ಟೇ ಭಾರತದ ಫುಟ್ಬಾಲ್ ಆಟಗಾರ ಸುನೀಲ್ ಛೆಟ್ರಿ ಪಡೆಯನ್ನು ಬೆಂಬಲಿಸಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಟ್ವೀಟ್ ಮಾಡಿದ್ದರು.

Making sure our flag flies high everywhere #Fifa18

A post shared by Rohit Sharma (@rohitsharma45) on

Leave A Reply

Your email address will not be published.